ಬೋರಗಿ ಸರ್ಕಾರಿ ಪ್ರಾಥಮಿಕ ಶಾಲೆ ಪ್ರೌಢಶಾಲಯಾಗಿ ಉನ್ನತಿಕರಣ
Boragi Government Primary School upgraded to High School
ಸಿಂದಗಿ 18: ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಕಲಿಕೆಯಿಲ್ಲ ಎನ್ನುವ ಕಾರಣಕ್ಕೆ ಸಾರ್ವಜನಿಕರು ಖಾಸಗಿ ಶಾಲೆಗಳಿಗೆ ಮೊರೆ ಹೋಗುತ್ತ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ದಿನೆ ದಿನೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಪ್ರತಿಯೊಂದು ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾದ್ಯಮ ಶಿಕ್ಷಣ ಅಳವಡಿಕೆಯಾಗುವಂತೆ ಮಾಡಿ ಗ್ರಾಮೀಣ ಮಕ್ಕಳಿಗೂ ಶಿಕ್ಷಣ ದೊರೆಯುವಂತೆ ಮಾಡಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ತಾಲೂಕಿನ ಬೋರಗಿ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಖೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತಿಕರಿಸಿ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ವಿಭಾಗವನ್ನು ಗ್ರಾಮಸ್ಥರೆಲ್ಲರೂ ಬಹಳ ವಿಜೃಂಭಣೆಯಿಂದ ಉದ್ಘಾಟಿಸಿದರು ಹಾಗೂ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಸಾಂಕೆತಿಕವಾಗಿ ವಿದ್ಯಾರ್ಥಿಗಳಿಗೆ ಬಟ್ಟೆ ಹಾಗೂ ಪುಸ್ತಕ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸಿದ್ರಾಮಯ್ಯ ಸ್ವಾಮಿಗಳು ಬ್ಯಾಡಗಿಹಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ, ಶಾಲಾ ಮುಖ್ಯ ಗುರುಗಳಾದ ಎಲ್ ವಾಯ್ ಹಿಪ್ಪರಗಿ, ಜಿಲ್ಲಾ ಕೆಡಿಪಿ ಸದಸ್ಯ ಶಿವಣ್ಣ ಕೊಟರಗಸ್ತಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಮಲ್ಲಣ್ಣ ಸಾಲಿ, ಗ್ರಾಮ ಅಧ್ಯಕ್ಷರ ಪ್ರತಿನಿಧಿ ನಿತ್ಯಾನಂದ ಕಟ್ಟಿಮನಿ, ಶಂಕರೆಪ್ಪ ಸಾವಳಸಂಗ, ಸಿದಲಿಂಗ ಗುಂಡಾಪುರ, ರಮೇಶ್ ಗುಬ್ಬೆವಾಡ, ಎಪಿಎಂಸಿ ನಿರ್ದೇಶಕರಾದ ಸದ್ದಾಂ ಗುಬ್ಬೆವಾಡ, ದಯಾನಂದ ನಾಲವಾರ, ಬಸವರಾಜ ಚಾವರ, ರಾಮಚಂದ್ರ ರಾಠೋಡ, ಬಸವರಾಜ ದ್ಯಾಪುರ, ಶಂಕರ ತೆಲಗಣಿ, ಅಶೋಕ ಬಿಜಾಪುರ್, ವಿಶ್ವನಾಥ್ ಹಗಟಗಿ, ಸೇರಿದಂತೆ ಗ್ರಾಮಸ್ಥರು ಮುಖಂಡರು ಸೇರಿದಂತೆ ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 