ಬಾರ್ಡರ್ ಗಾವಸ್ಕರ್ ಟ್ರೋಫಿ: ಸೋಲನುಭವಿಸಿದ ಭಾರತ, ದಶಕದ ಬಳಿಕ ಟ್ರೋಫಿ ತನ್ನದಾಗಿಸಿಕೊಂಡ ಆಸ್ಟ್ರೇಲಿಯಾ
Border Gavaskar Trophy: India Defeated, Australia Win Trophy After Decade
ಸಿಡ್ನಿ 08: ಭಾರತ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಸೋಲನುಭವಿಸಿದೆ. ಆಸ್ಟ್ರೇಲಿಯಾ 3-1 ಅಂತರದಿಂದ ಸರಣಿ ಗೆದ್ದುಕೊಂಡಿದೆ.
ಭಾರತ ನೀಡಿದ 162 ರನ್ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡವು ನಾಲ್ಕು ವಿಕೆಟ್ ಕಳೆದುಕೊಂಡು 27 ಓವರ್ ಗಳಲ್ಲಿ ಜಯ ಸಾಧಿಸಿತು.
ಆರು ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿದ್ದಲ್ಲಿಂದ ಮೂರನೇ ದಿನದಾಟದ ಬ್ಯಾಟಿಂಗ್ ಆರಂಭಿಸಿದ ಭಾರತವು 157 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಕೇವಲ ಏಳು ಓವರ್ ಗಳಲ್ಲಿ ಭಾರತವನ್ನು ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್ ಗಳು ಯಶಸ್ವಿಯಾದರು. 61 ರನ್ ಗಳಿಸಿದ ಪಂತ್ ಅವರದ್ದೇ ಗರಿಷ್ಠ ಗಳಿಕೆ. ಭಾರತವನ್ನು ಕಾಡಿದ ವೇಗಿ ಬೊಲ್ಯಾಂಡ್ ಆರು ವಿಕೆಟ್ ಕಿತ್ತರೆ, ನಾಯಕ ಕಮಿನ್ಸ್ ಮೂರು ವಿಕೆಟ್ ಪಡೆದರು. ಒಂದು ವಿಕೆಟ್ ವೆಬ್‌ಸ್ಟರ್ ಪಾಲಾಯಿತು.
ಗೆಲುವಿಗೆ 162 ರನ್ ಗುರಿ ಪಡೆದ ಆಸ್ಟ್ರೇಲಿಯಾ ಆರಂಭದಲ್ಲೇ ಬಿರುಸಿನ ಬ್ಯಾಟಿಂಗ್ ಗೆ ಮನ ಮಾಡಿತು. ಅದರಲ್ಲೂ ನಾಯಕ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಗೆ ಇಳಿಯದೆ ಇದ್ದಿದ್ದು ಭಾರತಕ್ಕೆ ಮುಳುವಾಯಿತು. ಭಾರತದ ಪರ ಪ್ರಸಿಧ್ ಕೃಷ್ಣ ಮೂರು ವಿಕೆಟ್ ಕಿತ್ತರೆ, ಸಿರಾಜ್ ಒಂದು ವಿಕೆಟ್ ಪಡೆದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 