ಭಾರತ್ ಬಂದ್ ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ; ವ್ಯಾಪಕ ಪ್ರತಿಭಟನೆ

ಬೆಂಗಳೂರು, ಜ 8 ಕೇಂದ್ರ ಸರ್ಕಾರದ ಕಾಮರ್ಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಸಿಪಿಐಎಂ, ಸಿಪಿಐ, ಸಿಐಟಿ ಸೇರಿ ರಾಜ್ಯದ ಹಲವು ಕಾರ್ಮಿಕ ಸಂಘಟನೆಗಳು ಒಗ್ಗೂಡಿ ನಗರದ ಫ್ರೀಡಂ ಪಾರ್ಕ್ ಎದುರಿನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಈ ಪ್ರತಿಭಟನೆಯಲ್ಲಿ 2000ಕ್ಕೂ ಹೆಚ್ಚು ಕಾರ್ಮಿಕರು ಪಾಲ್ಗೊಂಡಿದ್ದು, ಅಂಗನವಾಡಿ ಕಾರ್ಯಕರ್ತ್ಯರು ಭಾಗಿಯಾಗಿದ್ದರು. ಫ್ರೀಡಂ ಪಾರ್ಕ್ ರಸ್ತೆ ಕೆಂಪುಮಯವಾಗಿತ್ತು. ದೇಶಾದ್ಯಂತ ಎಲ್ಲಾ ಕಾರ್ಮಿಕರಿಗೂ 21,000 ಕನಿಷ್ಠ ಕೂಲಿ ನೀಡಬೇಕು. ಎಲ್ಲಾ ಕಾರ್ಮಿಕರಿಗೂ ಪಿಂಚಣಿ ಸೌಲಭ್ಯ ಒದಗಿಸಬೇಕು. ರಾಷ್ಟ್ರೀಯ ಪಿಂಚಣಿ ಯೋಜನೆ ಮೋಸದ್ದಾಗಿದ್ದು, ಹಿಂದಿನ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕು. ಅಲ್ಲದೇ, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಸಾರ್ವತ್ರಿಕ ವಿತರಣಾ ವ್ಯವಸ್ಥೆಯ ಮೇಲೆ ನಿಯಂತ್ರಣ ಹೊಂದಬೇಕು ಹಾಗೂ ನೂತನ ಉದ್ಯೋಗಗಳ ಸೃಷ್ಟಿ ಮತ್ತು ಖಾಲಿಯಿರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಮ್ಕರು ಪ್ರತಿಭಟನೆ ನಡೆಸಿದರು. ಗುತ್ತಿಗೆ ಉದ್ಯೋಗಿ ಮತ್ತು ಕಾಮರ್ಿಕರಿಗೆ ಖಾತರಿಯಾದ ನಿರಂತರ ಉದ್ಯೋಗ ಸಿಗಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೇಂದ್ರ ಬಜೆಟ್ ನಲ್ಲಿ ಮನ್ರೇಗಾ ಮತ್ತು ಕೃಷಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಕಾಮರ್ಿಕ ಕಾನೂನುಗಳ ಯೋಜಿತ ಕೋಡಿಂಗ್ ಅನ್ನು ಈ ಕೂಡಲೇ ಸ್ಥಗಿತವಾಗಬೇಕು. ಸಾರ್ವಜನಿಕ ವಲಯದ ಉದ್ಯಮಗಳ ಖಾಸಗೀಕರಣ ನಿಲ್ಲಿಸಬೇಕು. ಅಲ್ಲದೇ, ರೈಲ್ವೆ, ರಕ್ಷಣಾ ವಲಯ, ಕಲ್ಲಿದ್ದಲು ಮತ್ತು ಇನ್ನಿತರ ಸಾರ್ವಜನಿಕ ಉದ್ಯಮಗಳಲ್ಲಿ ಶೇಕಡಾ 100 ವಿದೇಶಿ ಬಂಡವಾಳ ಹೂಡಿಕೆ ಸ್ಥಗಿತಗೊಳಿಸಬೇಕು. ಎಲ್ಲಾ ಬ್ಯಾಂಕ್ ವಿಲೀನಗಳನ್ನು ಸ್ಥಗಿತಗೊಳಿಸಲು ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪ್ರತಿಭಟನಕಾರರು ಒತ್ತಾಯಿಸಿದರು. ಗಾಮರ್ೆಂಟ್ಸ್ ಲೇಬರ್ ಒಕ್ಕೂಟದ ಅಧ್ಯಕ್ಷೆ ರುಕ್ಮಿಣಿ ಸುದ್ದಿಗಾರರೊಂದಿಗೆ ಮಾತನಾಡಿ, ಗಾಮರ್ೆಂಟ್ಸ್ ಗಳಲ್ಲಿ ಮಹಿಳೆಯರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಅಲ್ಲದೇ, ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಮ್ಯಾನೇಜರ್ ಗಳಿಗೆ ಸಹಕಾರ ನೀಡದಿದ್ದರೇ, ಕೆಲಸದಿಂದ ವಜಾಗೊಳಿಸಲಾಗುತ್ತದೆ. ಈ ಮಧ್ಯೆ 44 ಕಾನೂನುಗಳನ್ನು 4 ಕ್ಕೆ ಇಳಿಸಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು ಹರಿಹಾಯ್ದರು. ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕೆನರಾ ಬ್ಯಾಂಕ್ ಸ್ಟಾಫ್ ಫೆಡರೇಶನ್ ಟೌನ್ ಹಾಲ್ ಬಳಿ ಇರುವ ಕೆನರಾ ಬ್ಯಾಂಕ್ ಆವರಣದಲ್ಲಿ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಂಕ್, ವಿಮೆ, ರಕ್ಷಣೆ, ಕಲ್ಲಿದ್ದಲು ಸೇರಿ ವಿವಿಧ ಕ್ಷೇತ್ರಗಳಲ್ಲಿ ವಿದೇಶಿ ನೇರ ಬಂಡವಾಳಕ್ಕೆ ಪ್ರತಿಭಟನಕಾರರು ವಿರೋಧ ವ್ಯಕ್ತಪಡಿಸಿದರು. ಪೊಲೀಸರ ಆದೇಶವನ್ನು ಮೀರಿ ಪ್ರತಿಭಟನೆಗೆ ಮುಂದಾದ ಕನ್ನಡ ಪರ ಸಂಘಟನೆಯ ಅಧ್ಯಕ್ಷೆ ವಾಟಾಳ್ ನಾಗರಾಜ್ ಮೆಜೆಸ್ಟಿಕ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದರು. ಅಲ್ಲದೇ ಬಸ್ ನಿಲ್ದಾಣದಲ್ಲಿ ಬಸ್ಸು ಸಂಚಾರಕ್ಕೆ ತಡೆಯೊಡ್ಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಇನ್ನು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಿಂದ ಚಂದಾಪುರ ವೃತ್ತದವರೆಗೆ ಮೆರವಣಿಗೆ ನೂರಾರು ಕಾರ್ಯಕರ್ತರು ಕೆಂಪು ಬಾವುಟ ಹಿಡಿದು ಪ್ರತಿಭಟನಾ ಜಾಥಾ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪೀಣ್ಯ ದಿಂದ ಜಾಲಹಳ್ಳಿ ಕ್ರಾಸ್ವರೆಗೆ ಪ್ರತಿಭಟನಕಾರರು ಜಾಥಾ ನಡೆಸಿದ್ದು, ಜಾಲಹಳ್ಳಿ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಇನ್ನು ಮುಷ್ಕರವನ್ನು ಬೆಂಬಲಿಸದೇ ಕರ್ತವ್ಯಕ್ಕೆ ಹಾಜರಾದ ಬಿಎಂಟಿಸಿ ನೌಕರರಿಗೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಚಾಲಕ- ನಿರ್ವಾಹಕರಿಗೆ ಗುಲಾಬಿ ವಿತರಿಸಿ ಅಭಿನಂದನೆ ಸಲ್ಲಿಸಿದರು. ಕಾರ್ಮಿಕರ ಮುಷ್ಕರಕ್ಕೆ ಬೆಂಬಲಿಸಿ ರಕ್ಷಣಾ ಇಲಾಖೆಯ ನೂರಾರು ಉದ್ಯೋಗಿಗಳು ನಗರದ ಟಿವಿ ಟವರ್ ಸಮೀಪದ ಸಿಕ್ಯೂಎಎಲ್ ಕಚೇರಿ ಮುಂಭಾಗ ಆಲ್ ಇಂಡಿಯಾ ಡಿಫೆನ್ಸ್ ಎಂಪ್ಲಾಯೀಸ್ ಫೆಡರೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರದ ಖಾಸಗೀಕರಣ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮುಷ್ಕರದ ನೇತೃತ್ವ ವಹಿಸಿದ್ದ ಫೇಡರೇಷನ್ ಉಪಾಧ್ಯಕ್ಷ ಎಂ.ಕೆ.ರವೀಂದ್ರನ್ ಪಿಳ್ಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಕ್ಷಣಾ ಉದ್ಯಮದ ಖಾಸಗೀಕರಣ ತಡೆಯಲು, ಜೊತೆಗೆ ನಿವೃತ್ತಿ ವೇತನದ ಹಕ್ಕನ್ನು ಮರಳಿ ಪಡೆಯುವ ಸಲುವಾಗಿ ಇಂದಿನಿಂದ ಮೂರು ದಿನಗಳ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದರು. ಕೇಂದ್ರ ಸಕರ್ಾರ ಖಾಸಗಿ ಕಾಪರ್ೊರೇಟ್ ಕುಳಗಳನ್ನು ಬಲಪಡಿಸುವ ಗುರಿ ಇಟ್ಟುಕೊಂಡಿದ್ದು, ಪ್ರಮುಖ ರಕ್ಷಣಾ ತಯಾರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳಾದ ಸಂಶೋಧನೆ ಹಾಗೂ ಸೇವಾ ಕಾರ್ಯಗಳನ್ನು ಅಂಬಾನಿ ಮತ್ತು ಅದಾನಿಗಳ ಗುಂಪಿಗೆ ವಹಿಸಲು ತೀಮರ್ಾನಿಸಿದೆ ಎಂದು ಗಂಭೀರ ಆರೋಪ ಮಾಡಿದರು. ಸಕರ್ಾರಿ ಕಾಪರ್ೊರೇಟ್ ವ್ಯವಸ್ಥೆಯಡಿ ದೇಶದ ಸೈನಿಕರಿಗೆ ಸ್ವೇಚ್ಛಾ ಸ್ವಾತಂತ್ರ್ಯವನ್ನು ನೀಡಬೇಕು. ಅವರಿಗೆ ಬೇಕಾದ ಯುದ್ಧ ಸಾಮಗ್ರಿಗಳನ್ನು ಪಡೆಯಲು ನಿರಾಕರಿಸಿದೆ, ಅವರಿಗೆ ಅನುಮತಿ ನೀಡಬೇಕು. ಈ ಎಲ್ಲ ವಿಚಾರಗಳನ್ನು ಸರಕಾರ ಸಂಸತ್ತಿನೊಳಗೆ ಹಾಗೂ ಹೊರಗೆ ಚಚರ್ಿಸಬೇಕು ಎಂದು ಅವರು ಒತ್ತಾಯಿಸಿದರು. ನಗರದಾದ್ಯಂತ 11 ಡಿಸಿಪಿ, 23 ಎಸಿಪಿ,111 ಇನ್ಸ್ಪೆಕ್ಟರ್ಗಳು, 316 ಪಿಎಸ್ಐ, 476 ಎಎಸ್ಐಗಳು, 4,547 ಕಾನ್ಸ್ಟೇಬಲ್ಗಳು, 82 ಕೆಎಸ್ಆಪರ್ಿ ಹಾಗೂ ಸಿಎಆರ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಅಲ್ಲದೇ, ಟೌನ್ ಹಾಲ್ ಬಳಿ 2,000 ಪೊಲೀಸ್ ಸಿಬ್ಬಂದಿ ನಿಯೋಜನೆಗೊಳಿಸಲಾಗಿತ್ತು. ಇನ್ನು ಮಡಿಕೇರಿ ನಗರದ ಹೊರವಲಯದ ಚೈನ್ ಗೇಟ್ ಬಳಿ ಸಕರ್ಾರಿ ಬಸ್ಸಿಗೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆಯೂ ನಡೆಯಿತು. ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಸಕರ್ಾರಿ ಬಸ್ಸಿಗೆ ಕಲ್ಲು ತೂರಿದ ಹಿನ್ನೆಲೆಯಲ್ಲಿ ಬಸ್ಸಿನ ಮುಂಭಾಗದ ಗ್ಲಾಸ್ಗೆ ಸಣ್ಣಪುಟ್ಟ ಹಾನಿಯಾಗಿತ್ತು. ಆದರೆ, ಅದೃಷ್ಟವಶಾತ್ ಬಸ್ಸಿನಲ್ಲಿ ಯಾರೂ ಇರಲಿಲ್ಲ. ಮಂಡ್ಯ ಜಿಲ್ಲೆಯ ಪಾಂಡವಪುರ ವಿಭಾಗಕ್ಕೆ ಸೇರಿದ ಸಕರ್ಾರಿ ಬಸ್ಸು ಇದಾಗಿತ್ತು ಎಂದು ತಿಳಿದು ಬಂದಿದ್ದು, ಬಸ್ಸು ಚಾಲಕ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾರತ್ ಬಂದ್ಗೆ ಬಳ್ಳಾರಿಯಲ್ಲಿ ಬೆಂಬಲ ವ್ಯಕ್ತಪಡಿಸಿ, ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಿಐಟಿಯು, ಎಐಡಿಎಸ್ಯು, ಸಿಪಿಐ, ಎಐವೈಎಫ್ನ ನೂರಾರು ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಕೇಂದ್ರ ಸಕರ್ಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮೋತಿವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಪಾಲ್ಗೊಂಡು ಕಾಮರ್ಿಕ ಸಂಘಟನೆಗಳಿಗೆ ಸಾಥ್ ನೀಡಿ, ಕೇಂದ್ರ ಸಕರ್ಾರದ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನ ಹೊರಹಾಕಿದರು. ಟಾಟಾ ಮಾಕರ್ೊಪೊಲೊ ಕಾಮರ್ಿಕರಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಟಿಎಂಕೆಕೆಯು ಸಂಘಟನೆಯ ನೇತೃತ್ವದಲ್ಲಿ ಕಾಮರ್ಿಕರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿ, ಕೇಂದ್ರ ಸಕರ್ಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಯಚೂರಿನಲ್ಲಿ ಭಾರತ್ ಬಂದ್ ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜಿಲ್ಲೆಯ ಸಿಂಧನೂರು, ದೇವದುರ್ಗದ ಜಾಲಹಳ್ಳಿಯಲ್ಲಿ ಅಂಗಡಿ ಬಂದ್ ಮಾಡಿ ಮುಷ್ಕರಕ್ಕೆ ಜನ ಬೆಂಬಲ ಸೂಚಿಸಿದರು. ರಾಯಚೂರಿನಲ್ಲಿ ಕನರ್ಾಟಕ ಪ್ರಾಂತ ರೈತ ಸಂಘ ನಗರದ ರೈಲ್ವೆ ನಿಲ್ದಾಣ ವೃತ್ತದಲ್ಲಿ ರಸ್ತಾ ರೋಕೋ ನಡೆಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿ, ವಿವಿಧ ಬ್ಯಾಂಕ್ ಗಳ ಸಿಬ್ಬಂದಿ ಬ್ಯಾಂಕ್ ಗಳ ಮುಂದೆ ಪ್ರತಿಭಟನೆ ನಡೆಸಿದರು. ಬಳಿಕ ಅಂಬೇಡ್ಕರ್ ವೃತ್ತದಲ್ಲಿ 10 ಕ್ಕೂ ಹೆಚ್ಚು ಕಾಮರ್ಿಕ ಸಂಘಟನೆಗಳು ಸಮಾವೇಶ ನಡೆಸಿದವು.ನಂತರ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಇನ್ನು, ಸಾರ್ವತ್ರಿಕ ಮುಷ್ಕರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲಾ ಕೇಂದ್ರ ಕಾರವಾರದಲ್ಲಿ ಎಂದಿನಂತೆ ಬಸ್ಸು ಸಂಚಾರ ಮಾಡಿದವು. ನಗರದ ಮಾಲಾದೇವಿ ಮೈದಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳನ್ನು ಹಾಯ್ದು, ಜಿಲ್ಲಾಧಿಕಾರಿ ಕಚೇರಿ ತಲುಪಿತು. ಪ್ರತಿಭಟನೆಯಲ್ಲಿ ಸಿಐಟಿಯು, ಅಂಗನವಾಡಿ, ಆಶಾ ಕಾರ್ಯಕತರ್ೆಯರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಉಡುಪಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬೆಂಬಲ ವ್ಯಕ್ತವಾಗಲಿಲ್ಲ. ಶಾಲಾ, ಕಾಲೇಜುಗಳು, ಸಕರ್ಾರಿ ಕಚೇರಿಗಳು, ಬ್ಯಾಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ದೇಶವ್ಯಾಪಿ ಮುಷ್ಕರ ಹಿನ್ನಲೆಯಲ್ಲಿ ವಿವಿಧ ಕಾಮರ್ಿಕ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ನಗರದ ಬೋಡರ್್ ಹೈಸ್ಕೂಲ್ ಆವರಣದಿಂದ ಆರಂಭವಾದ ಮೆರವಣಿಗೆ ಅಜ್ಜರಕಾಡು ಹುತಾತ್ಮರ ವೇದಿಕೆ ತನಕ ನಡೆಯಿತು. ಹುಬ್ಬಳ್ಳಿಯಲ್ಲಿ ಕೇಂದ್ರ ಸಕರ್ಾರದ ಕಾಮರ್ಿಕ ವಿರೋಧಿ ನೀತಿ ಖಂಡಿಸಿ ಸುಮಾರು 10 ಕ್ಕೂ ಹೆಚ್ಚು ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು. ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಸಕರ್ಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಏಷ್ಯಾದಲ್ಲೇ ಅತಿ ದೊಡ್ಡದಾದ ಹುಬ್ಬಳ್ಳಿಯ ಎಪಿಎಂಸಿಗೆ ಬಂದ್ನ ಬಿಸಿ ತಟ್ಟಿತು. ಕೂಲಿಕಾಮರ್ಿಕರು ಪ್ರತಿಭಟನೆಯಲ್ಲಿ ಭಾಗಿಯಾದ ಪರಿಣಾಮ ಎಂಪಿಎಂಸಿ ಸಂಪೂರ್ಣ ಸ್ಥಗಿತಗೊಂಡಿತ್ತು. ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ತಂದಿರಲಿಲ್ಲ. ಅಲ್ಲದೇ ಹಮಾಲರ ಸಂಘ ನಿನ್ನೆ ಬಂದ್ಗೆ ಬೆಂಬಲ ಘೋಷಿಸಿದ ಪರಿಣಾಮ ವ್ಯಾಪಾರ ವಹಿವಾಟು ಸ್ಥಬ್ತಗೊಂಡಿತ್ತು. ಎಂಪಿಎಂಸಿಯಲ್ಲಿನ ಎಲ್ಲಾ ಅಂಗಡಿ-ಮುಂಗಟ್ಟುಗಳು ಸ್ಥಗಿತವಾಗಿತ್ತು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಮರ್ಿಕ ಸಂಘಟನೆ ಮುಖಂಡ ದೇವಾನಂದ ಜಗಾಪೂರಿ, ಕಾಮರ್ಿಕರ ಹಿತಾಸಕ್ತಿ ಕಾಪಾಡಬೇಕಿದ್ದ ಕೇಂದ್ರ ಸಕರ್ಾರ ಕಾಮರ್ಿಕ ವಿರೋಧಿ ನೀತಿ ಜಾರಿಗೊಳಿಸಿ ಅವರ ಬದುಕಿನ ಜೊತೆಗೆ ಆಟವಾಡುತ್ತಿದೆ. ಕಾಮರ್ಿಕರಿಗೆ ಕನಿಷ್ಠ ಕೂಲಿ ನಿಗದಿಪಡಿಸಬೇಕು. ಬ್ಯಾಂಕ್ ಖಾಸಗೀಕರಣ ಹಾಗೂ ವಿಲೀನಗೊಳಿಸುವುದನ್ನು ಕೈಬಿಡಬೇಕು. ಅಸಂಘಟಿತ ಕಾಮರ್ಿಕರಿಗೆ ಪ್ರತಿ ತಿಂಗಳು 21 ಸಾವಿರ ರೂ. ಸಂಬಳ ನಿಗದಿಪಡಿಸಬೇಕು ಎಂದು ಅವರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬ್ಯಾಂಕ್, ಎಲ್ ಐಸಿ ನೌಕರರ ಅಸೋಸಿಯೇಷನ್, ಸಿಐಟಿಯು, ಸಿಪಿಎಂ, ಅಂಗನವಾಡಿ, ಆಶಾ ಕಾರ್ಯಕತರ್ೆಯರು ಪಾಲ್ಗೊಂಡಿದ್ದರು. ದಾವಣಗೆರೆಯಲ್ಲಿ, ಕೆಂಪು ಬಾವುಟವೂ ರೈತನದೋ, ರಕ್ತ ಬಾವುಟವೂ ಕೂಲಿಯದೋ', "ದೇಶ ದಿವಾಳಿ ಮಾಡ್ಯಾರೋ, ದೇಶ ಒತ್ತೆ ಇಟ್ಯಾರೋ... ಎಂಬ ಹಾಡು ಪ್ರತಿಭಟನೆ ವೇಳೆ ಕೇಳಿಬಂದಿತು. ಕಾಮರ್ಿಕರ ಮುಖಂಡ ಮಂಜುನಾಥ್ ಸಂಗಡಿಗರು, ಕೇಂದ್ರ ಸಕರ್ಾರದ ಕಾಮರ್ಿಕ ನೀತಿ ವಿರೋಧಿ ಧೋರಣೆಗೆ ಈ ರೀತಿ ಆಕ್ರೋಶ ವ್ಯಕ್ತಪಡಿಸಿದರು. ಕೋಲಾರದಲ್ಲಿ ಇಂದು ಮುಂಜಾನೆ 5 ಗಂಟೆಗೆ ಬೀದಿಗಿಳಿದಿದ್ದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಕೋಲಾರ ನಗರದ ಟೋಲ್ ಗೇಟ್ ಬಳಿ ಇರುವ ಬಸ್ ಡಿಪೋ ಮುಂದೆ ಪ್ರತಿಭಟನಾಕಾರರನ್ನು ಬಂಧಿಸಲಾಗಿತ್ತು. ಡಿಪೋ ಮುಂದೆ ಬಸ್ಸುಗಳನ್ನ ಹೊರ ಬಿಡದೆ ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದರು. ಮುಷ್ಕರಕ್ಕೆ ಕಲಬುರಗಿ, ಬೀದರ್, ಯಾದಿಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ವಿವಿಧ ಕಾಮರ್ಿಕರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಶಾಲಾ-ಕಾಲೇಜು, ಬಸ್ಸು ಮತ್ತು ಆಟೋ ಸಂಚಾರ ಎಂದಿನಂತಿತ್ತು. ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ವ್ಯಾಪಾರ, ವಹಿವಾಟು ನಡೆದಿದ್ದು, ಚಿತ್ರಮಂದಿರಗಳು, ಹೋಟೆಲ್ ಗಳು ತೆರೆದಿದ್ದವು. ಆದರೆ, ಕಲಬುರಗಿಯಲ್ಲಿ ಮುಷ್ಕರದ ಬಿಸಿ ಸ್ವಲ್ಪಮಟ್ಟಿಗೆ ತಟ್ಟಿದೆ. ಸಿಐಟಿಯು, ಸಿಪಿಐ(ಎಂ), ಎಐಟಿಯುಸಿ ಸೇರಿದಂತೆ ವಿವಿಧ ಕಾಮರ್ಿಕ ಸಂಘಟನೆಗಳು ಬೆಳಿಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ್ದವು. ಕಾಮರ್ಿಕ ಮುಖಂಡ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಕೇಂದ್ರ ಸಕರ್ಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಬಸ್ ನಿಲ್ದಾಣದ ಕುಳಿತು ಪ್ರತಿಭಟನೆ ನಡೆಸಿ ಬಸ್ಸು ಸಂಚಾರಕ್ಕೆ ಅಡ್ಡಿ ಪಡಿಸಿದ್ದರಿಂದ ಕಾಮರ್ಿಕ ಮುಖಂಡ ಮಾರುತಿ ಮಾನ್ಪಡೆ ಸೇರಿದಂತೆ ಮತ್ತಿತರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ನಂತರ ಬಿಡುಗಡೆಗೊಳಿಸಿದರು. ಮುಷ್ಕರದ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಡ್ರೋನ್ ಕ್ಯಾಮೆರ್ ಬಳಸಿಕೊಂಡಿದ್ದರು. ಪೊಲೀಸ್ ಬಿಗಿ ಬಂದೋಬಸ್ತ್ ಗಾಗಿ 100 ಪೊಲೀಸ್ ಅಧಿಕಾರಿ, 500 ಮುಖ್ಯಪೇದೆ, 200 ಹೋಂಗಾರ್ಡ, 6 ಕೆ.ಎಸ್.ಆರ್ಪಿ ತುಕಡಿ, 6 ಸಂಚಾರಿ ಪೊಲೀಸ್ ತಂಡ, ಸಿಸಿಟಿವಿ, ಬೈನಾಕೂಲರ್ ಮತ್ತು ಡ್ರೋನ್ ಕ್ಯಾಮೆರ್ ಗಳನ್ನು ಬಳಸಲಾಗಿತ್ತು. ಅಲ್ಲದೇ, ಕೆಲಕಾಲ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಸಿಐಟಿಯು, ಸಿಪಿಐ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಹಸ್ರಾರು ಜನ ಕಾಮರ್ಿಕರು ನಗರದ ನಗರೇಶ್ವರ ಶಾಲೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಚಿಕ್ಕಬಳ್ಳಾಪುರದಲ್ಲಿ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 50ಕ್ಕೂ ಹೆಚ್ಚು ಮಂದಿ ಪ್ರತಿಭಟನಕಾರರನ್ನು ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ಪಡೆದಿದರು. ಸಿಪಿಐಎಂ ಮುಖಂಡರು ಹಾಗೂ ಕಾರ್ಯಕರ್ತರು ಚಿಕ್ಕಬಳ್ಳಾಪುರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ಶಿಡ್ಲಘಟ್ಟ ವೃತ್ತದ ರಸ್ತೆಯಲ್ಲಿ ಕುಳಿತು ಪ್ರತಿಭಟನಾ ಧರಣಿ ಮಾಡಿದರು. ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ರಸ್ತೆಯಲ್ಲೇ ಕುಳಿತು ಪ್ರತಿಭಟನಾ ಧರಣಿ ನಡೆಸಿದರು. ಈ ಹಿನ್ನಲೆಯಲ್ಲಿ ಗೌರಿಬಿದನೂರು ಮಾರ್ಗದ ರಸ್ತೆ ಬಂದ್ ಆದ ಪರಿಣಾಮ ಜಿಲ್ಲಾಸ್ಪತ್ರೆಗೆ ಬಂದು ಹೋಗುವ ಅಂಬುಲೆನ್ಸ್ ಗಳ ಒಡಾಟಕ್ಕೆ ಅಡ್ಡಿಯಾಗಿತ್ತು.ಈ ಸಂದರ್ಭದಲ್ಲಿ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಎಸ್ಪಿ ಅಭಿನವ್ ಖರೆ ಪ್ರತಿಭಟನೆ ವಾಪಸ್ಸು ಪಡೆಯುವಂತೆ ಮನವಿ ಮಾಡಿಕೊಂಡರು. ಈ ವೇಳೆ ಅಂಬುಲೆನ್ಸ್ ಸಹ ಅದೇ ರಸ್ತೆಯಲ್ಲಿ ಬಂದ ಪರಿಣಾಮ ಪ್ರತಿಭಟನಕಾರರನ್ನು ಚದುರಿಸಿದ ಪೊಲೀಸರು ಅವರನ್ನ ವಶಕ್ಕೆ ಪಡೆದುಕೊಂಡರು. ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು, ವಾಹನಗಳ ಸಂಚಾರ ಎಂದಿನಂತೆ ಸಾಗಿದ್ದು, ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇನ್ನೊಂದೆಡೆ ಜಿಲ್ಲೆಯ ಬಾಗೇಪಲ್ಲಿ, ಗೌರಿಬಿದನೂರಿನಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನಲ್ಲಿಯೂ ಕಾಮರ್ಿಕ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.