ಬೀದಿನಾಯಿ ಕಚ್ಚಿ ರೇಬಿಸ್ ಖಾಯಿಲೆಗೆ ಬಾಲಕ ಬಲಿ
Boy dies of rabies after being bitten by a stray dog
ಕೊಲ್ಹಾರ 02: ತಾಲೂಕಿನ ಸಿದ್ಧನಾಥ ಗ್ರಾಮದಲ್ಲಿ ಬೀದಿನಾಯಿ ಕಚ್ಚಿ ರೇಬಿಸ್ ಖಾಯಿಲೆಯಿಂದ 16 ವರ್ಷದ ಬಾಲಕ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾನೆ ಗ್ರಾಮದ ದರಿಯಪ್ಪ ಕೋಳಮಲಿ ಅವರ ಸುಪುತ್ರ ಅಪ್ಪು ಕೋಳಮಲಿ ಈಗತಾನೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಕಳೆದ ಎಪ್ರಿಲ್ ತಿಂಗಳ ಪರೀಕ್ಷೆಯ ಫಲಿತಾಂಶದಲ್ಲಿ ಆತ ಪಾಸಾಗಿದ್ದ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಗ್ರಾಮದಲ್ಲಿ ಬೀದಿನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕನನ್ನು ಪಾಲಕರು ಆಸ್ಪತ್ರೆಗೆ ಕರೆದುಕೊಂಡು ಹೋಗದೆ ನಾಟಿ ವೈದ್ಯರ ಹತ್ತಿರ ಹೋಗಿ ಚಿಕಿತ್ಸೆ ಕೊಡಿಸಿದ್ದರು ಎನ್ನಲಾಗುತ್ತಿದೆ. ಬಳಿಕ ಬಾಲಕ ರೋಗ ಉಲ್ಬಣಗೊಂಡು ರೇಬಿಸ್ ಖಾಯಿಲೆಯಿಂದ ಮೃತಪಟ್ಟಿದ್ದಾನೆ.
ಶನಿವಾರ ಗ್ರಾಮದಲ್ಲಿ ಆತನ ಅಂತ್ಯಕ್ರಿಯೆ ನಡೆದಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದೆ ಗ್ರಾಮದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಬೀದಿನಾಯಿಗಳ ಅಟ್ಟಹಾಸ ಮೆರೆದಿದ್ದು ಕುರಿ ಮೇಕೆಗಳು ಸೇರಿದಂತೆ ಶಾಲಾ ಮಕ್ಕಳ ಮೇಲೆ ಗಂಭೀರವಾಗಿ ಗಾಯಗೊಂಡಿರುವ ಘಟನೆಗಳು ಜರುಗಿದ್ದವು. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರದ ಭರವಸೆಯ ಹೇಳಿಕೆ ನೀಡಿದ್ದರೂ ಇದುವರೆಗೆ ಬೀದಿನಾಯಿಗಳ ದಾಳಿಗೆ ಒಳಗಾದ ಕುಟುಂಬಕ್ಕೆ ಯಾವುದೇ ಪರಿಹಾರದ ಹಣವನ್ನು ಒದಗಿಸಿಲ್ಲ ಎಂದು ನೊಂದಿರುವ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 