ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣಗುರು
Brahmashri Narayana Guru, who propagated the message of equality and social justice
ಗದಗ, ಆಗಸ್ಟ್ 28: ಸಮಾಜದಲ್ಲಿ ಸಮಾನತೆ, ಸಹೋದರತೆ ಹಾಗೂ ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣಗುರು ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಅವರು ಸಮಾಜಕ್ಕೆ ನೀಡಿದರು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಿಟಿಷರ ಆಡಳಿತದ ಸಂದರ್ಭದಲ್ಲಿ ಕೇರಳ ಹಾಗೂ ದಕ್ಷಿಣ ಕನ್ನಡ ಭಾಗಗಳಲ್ಲಿ ತೀವ್ರವಾಗಿದ್ದ ಅಸ್ಪೃಶ್ಯತೆ, ಮೇಲು-ಕೀಳು ಹಾಗೂ ಜಾತಿ ತಾರತಮ್ಯದ ವಿರುದ್ಧ ನಾರಾಯಣಗುರು ಹೋರಾಟ ನಡೆಸಿದರು.
ಶೂದ್ರ ಸಮುದಾಯದಲ್ಲಿ ಜನಿಸಿದರೂ ಉನ್ನತ ಶಿಕ್ಷಣ ಪಡೆದು, ಸಾಮಾಜಿಕ ಕಟ್ಟಳೆಗಳನ್ನು ಧಿಕ್ಕರಿಸಿ ಕೆಳವರ್ಗದ ಜನರಿಗೂ ಧಾರ್ಮಿಕ ಹಕ್ಕು ದೊರೆಯುವಂತೆ ದೇವಾಲಯಗಳನ್ನು ನಿರ್ಮಿಸುವ ಮೂಲಕ ಸಮಾನತೆಯ ಸಂದೇಶ ಸಾರಿದರು ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 