ಬಳ್ಳಾರಿ.21: ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ.27 ರಂದು ಸರಳವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊಡಗು ಜಿಲ್ಲೆ ಮತ್ತು ಕೇರಳ ರಾಜ್ಯದಲ್ಲಿ ಅತಿವೃಷ್ಠಿ ಮಳೆಯಾದ ಕಾರಣ ಜಯಂತಿಯನ್ನು ಸರಳವಾಗಿ ಆಚರಿಸಲು ಸಭೆಯಲ್ಲಿ ಒಮ್ಮತದ ನಿಧರ್ಾರ ಕೈಗೊಳ್ಳಲಾಗಿದೆ ಎಂದು ಹೇಳಿದ ಎಡಿಸಿ ಸೋಮಶೇಖರ ಅವರು, ಆ.27 ರಂದು ಬೆಳಗ್ಗೆ 9.30ಕ್ಕೆ ಈಡಿಗ ಹಾಸ್ಟೆಲ್ನ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ಭಾವಚಿತ್ರದ ಮೆರವಣಿಗೆಯು ರಾಯಲ್ ವೃತ್ತ, ಡಿ.ಸಿ.ಕಚೇರಿ, ಹೆಚ್.ಆರ್.ಜಿ.ಗವಿಯಪ್ಪ ವೃತ್ತದ ಮುಖಾಂತರ ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಲಿದೆ ಎಂದರು.
ಮೆರವಣಿಗೆ ನಂತರ ಅಂದರೆ ಬೆಳಗ್ಗೆ 11.30ಕ್ಕೆ ವೇದಿಕೆ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಸಂಪನ್ಮೂಲ ವ್ಯಕ್ತಿಯೊಬ್ಬರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇದಾದ ನಂತರ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಈಡಿಗ ಸಮುದಾಯ ಹಾಗೂ ಇನ್ನೀತರ ಸಮುದಾಯಗಳ ಮುಖಂಡರು ಜಯಂತಿಗೆ ನಿಗಿದಿಪಡಿಸಲಾದ ಅನುದಾನವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ನೀಡಲು ಪ್ರಸ್ತಾಪಿಸಿದರು. ಇದಕ್ಕುತ್ತರಿಸಿದ ಅಪರ ಜಿಲ್ಲಾಧಿಕಾರಿಗಳು ಸಕರ್ಾರದ ಅನುದಾನವನ್ನು ಯಾವ ಕಾರ್ಯಕ್ರಮಕ್ಕೆ ನಿಗದಿಪಡಿಸಲಾಗಿದೆಯೋ ಅದಕ್ಕೆ ಮಾತ್ರ ವಿನಿಯೋಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರು ತಮ್ಮ ವಿವಿಧ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಉಮೇಶ ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕರಾದ ಬಿ.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಬಾಲಗೋವಿಂದ ಅಕಾಡೆಮಿಯ ಅಧ್ಯಕ್ಷ ಎಂ.ಹೆಚ್.ಶ್ರೀನಾಥ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 16 ಸಾವಿರ ರೂ.ಗಳ ಚೆಕ್ನ್ನು ಅಪರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರಿಗೆ ಇದ ಸಂದರ್ಭದಲ್ಲಿ ಹಸ್ತಾತರಿಸಿದರು.