ನವದೆಹಲಿ, ಜ 21 : ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಇದೇ 24ರಂದು ಭಾರತಕ್ಕೆ ಆಗಮಿಸಲಿದ್ದಾರೆ.
ಶುಕ್ರವಾರದಿಂದ ನಾಲ್ಕು ದಿನಗಳ ದೇಶ ಪ್ರವಾಸ ಪ್ರಾರಂಭವಾಗಲಿದೆ
ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಭಾರತ ಭೇಟಿಯಾಗಿದೆ ಬೋಲ್ಸನಾರೊ ಅವರೊಂದಿಗೆ 7 ಮಂತ್ರಿಗಳು, ಉನ್ನತ ಅಧಿಕಾರಿಗಳು ಮತ್ತು ದೊಡ್ಡ ವಾಣಿಜ್ಯ ನಿಯೋಗವೂ ಆಗಮಿಸಲಿದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಅವರು ಇದೆ 24 ರಿಂದ 27 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ .
26 ರಂದು ನಡೆಯಲಿರುವ 71 ನೇ ಗಣರಾಜ್ಯೋತ್ಸವ ಪರೇಡ್ ನಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.