ಮೈಸೂರು, ಜೂನ್ 13, ಲಾಕ್ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ದೇವಾಲಯದ ಬಾಗಿಲು ತೆರೆದಿದ್ದರೂ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಇಂದು, ನಾಳೆ ಭಕ್ತರ ಪ್ರವೇಶವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.ಶನಿವಾರ ಮತ್ತು ಭಾನುವಾರ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ರದ್ದು ಪಡಿಸಲಾಗಿದೆ. ವಾರಾಂತ್ಯವಾದ್ದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಎರಡು ದಿನ ಮಾತ್ರ ಪ್ರವೇಶ ರದ್ದುಪಡಿಸಿ, ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.