ಬಾಕಿ ವೇತನಕ್ಕಾಗಿ ಉಪಹಾರ ಸ್ಥಗಿತ; ಮಧ್ಯಾಹ್ನದಿಂದ ಮತ್ತೆ ಇಂದಿರಾ ಕ್ಯಾಂಟೀನ್ ಊಟ ವಿತರಣೆ
Breakfast stopped due to unpaid wages; Indira Canteen food distribution resumes from noon
ಬಳ್ಳಾರಿ 11: ನಗರದಲ್ಲಿ ಬಡವರು, ಕೂಲಿ ಕಾರ್ಮಿಕರು ಹಾಗೂ ಆಶ್ರಯವಿಲ್ಲದ ಜನರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಆರಂಭಿಸಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಇಂದು ಬೆಳಿಗ್ಗೆ ಉಪಹಾರ ವಿತರಣೆ ಸ್ಥಗಿತಗೊಂಡ ಘಟನೆ ನಡೆದಿದೆ.ನಗರದ ಮೋತಿ ಸರ್ಕಲ್, ಓಪಿಡಿ, ಟ್ರಾಮಾಕೇರ್ ಸೆಂಟರ್, ಬಾಪೂಜಿನಗರ, ಜಿಲ್ಲಾ ಆಸ್ಪತ್ರೆ ಹಾಗೂ ಬೆಳಗಲ್ಲು ಕ್ರಾಸ್ ಸೇರಿದಂತೆ ನಗರದ ಏಳು ಇಂದಿರಾ ಕ್ಯಾಂಟೀನ್ಗಳಲ್ಲಿ ಬೆಳಿಗ್ಗೆ ?5ಕ್ಕೆ ಉಪಹಾರ ಮತ್ತು ಮಧ್ಯಾಹ್ನ ಹಾಗೂ ರಾತ್ರಿ ?10ಕ್ಕೆ ಊಟ ನೀಡಲಾಗುತ್ತಿದೆ. ಈ ಯೋಜನೆಗೆ ಸಂಬಂಧಿಸಿದ ವ್ಯತ್ಯಾಸದ ಹಣವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ಭರಿಸಲಾಗುತ್ತಿದೆ.ಬಳ್ಳಾರಿಯ ಏಳು ಕ್ಯಾಂಟೀನ್ಗಳಲ್ಲಿ ಪ್ರತಿದಿನ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಜನರು ಉಪಹಾರ ಮತ್ತು ಊಟ ಪಡೆಯುತ್ತಿದ್ದು, ಪಾಲಿಕೆಯಿಂದ ಮಾಸಿಕ ?13 ರಿಂದ ?15 ಲಕ್ಷದವರೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ.
ಆದರೆ, ಕ್ಯಾಂಟೀನ್ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರ ಕಂಪನಿಗೆ ಕಳೆದ 9 ತಿಂಗಳಿಂದ ಪಾಲಿಕೆಯಿಂದ ಹಣ ಬಿಡುಗಡೆಯಾಗದ ಹಿನ್ನೆಲೆ, ಕಂಪನಿಯು 50ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಮೂರು ತಿಂಗಳಿನಿಂದ ವೇತನ ಪಾವತಿಸಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತ ಸಿಬ್ಬಂದಿಗಳು ಶುಕ್ರವಾರ ಬೆಳಿಗ್ಗೆ ಉಪಹಾರ ತಯಾರಿಸಿ ವಿತರಿಸದಿರಲು ನಿರ್ಧರಿಸಿದ್ದರು. ಪರಿಣಾಮವಾಗಿ ನಗರದ ಏಳು ಇಂದಿರಾ ಕ್ಯಾಂಟೀನ್ಗಳಲ್ಲಿ ಬೆಳಗಿನ ಉಪಹಾರ ವಿತರಣೆ ಸಂಪೂರ್ಣ ಸ್ಥಗಿತಗೊಂಡಿತು.ಘಟನೆ ಕುರಿತು ಮಾಹಿತಿ ತಿಳಿದ ನಿರ್ವಹಣಾ ಸಂಸ್ಥೆಯವರು ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸಿ ಬಾಕಿ ವೇತನ ಪಾವತಿಸುವ ಭರವಸೆ ನೀಡಿದರು. ಬಳಿಕ ಮಧ್ಯಾಹ್ನ ವೇಳೆಗೆ ಅಡುಗೆ ಸಿದ್ಧಪಡಿಸಿ ಊಟ ವಿತರಣೆ ಪುನರಾರಂಭಿಸಲಾಯಿತು.ಇನ್ನೂ ಪಾಲಿಕೆಯಿಂದ ಐದು ತಿಂಗಳ ಬಾಕಿ ಹಣ ಬಿಡುಗಡೆಯಾಗಬೇಕಿದ್ದು, ಶೀಘ್ರ ಹಣ ಬಿಡುಗಡೆ ಮಾಡಬೇಕು ಎಂದು ಸಿಬ್ಬಂದಿಗಳು ಒತ್ತಾಯಿಸಿದ್ದಾರೆ.
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ 