ಎನ್‌ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಎನ್‌ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ Bribe for issuing NOC: Khanapur Taluk Health Officer caught in Lokayukta trap.

ಬೆಳಗಾವಿ : ಪೌಲ್ಟ್ರಿ ಫಾರ್ಮ್ ಆರಂಭಿಸಲು ಎನ್‌ಒಸಿ (ನಿರಾಕ್ಷೇಪಣಾ ಪತ್ರ) ನೀಡಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಜಿಲ್ಲೆಯ ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಮಹೇಶ ಕಿವಡಸಣ್ಣವರ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ ಎಂದು ತಿಳಿದುಬಂದಿದೆ.

   ಖಾನಾಪುರ ತಾಲೂಕಿನ ಕಾಮಶಿನಕೊಪ್ಪ ಗ್ರಾಮದ ಮಾಜಿ ಸೈನಿಕ ಉದಯ ಚವಲಗಿ ಅವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

  ಲೋಕಾಯುಕ್ತ ಡಿವೈಎಸ್‌ಪಿ ನಿರಂಜನ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ದೂರುದಾರರಿಂದ 6,000 ನಗದು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಆರೋಗ್ಯಾಧಿಕಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

    ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.