4 ತಿಂಗಳಿಂದ ಮುಗಿಯದ ಸೇತುವೆ ದುರಸ್ತಿ: ಪ್ರಯಾಣಿಕರಿಗೆ, ಶಾಲಾ ಮಕ್ಕಳಿಗೆ ಸಂಕಷ್ಟ
Bridge repairs incomplete for four months: Commuters and school children face hardship
ಆಲಮೇಲ : ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ದುರಸ್ತಿ ಸಲುವಾಗಿ ರಸ್ತೆ ಸಂಚಾರ ಸ್ಥಗಿತಗೊಳಿಸಿರುವುದರಿಂದ ಕಳೆದ ನಾಲ್ಕು ತಿಂಗಳಿಂದ ಸಾರಿಗೆ ಸಂಸ್ಥೆಯ ಬಸ್ ಸಂಚಾರವಿಲ್ಲದೆ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ವಿಜಯಪುರ ಕಲಬುರಗಿ ಜಿಲ್ಲೆಗಳಿಗೆ ಸಂಪರ್ಕ ಕೊಂಡಿಯಾಗಿರುವ, ಓರಾದ ಸದಾಶಿವಘಡ ರಾಜ್ಯ ಹೆದ್ದಾರಿ 34, ಅದರಲ್ಲಿ ಬರುವ ಈ ಸೇತುವೆಯ ಮೇಲ್ಭಾಗ ಕಿತ್ತು ಹೋಗಿ ಪ್ರಯಾಣಕ್ಕೆ ಸಂಚಕಾರ ಎದುರಾಗಿತ್ತು. ಆದ್ದರಿಂದ ಕಳೆದ ಎಪ್ರಿಲ್ 23ರಿಂದ ಎರಡು ತಿಂಗಳುಗಳ ಕಾಲ ಸೇತುವೆ ದುರಸ್ತಿ ಮಾಡುವ ಸಲುವಾಗಿ ಸಾರಿಗೆ ಸಂಸ್ಥೆಯ ಬಸ್ ಸೇರಿದಂತೆ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.
ಸದ್ಯ ದ್ವಿಚಕ್ರ ಹಾಗೂ ಸಣ್ಣ ವಾಹನಗಳನ್ನು ಸೇತುವೆ ಮೇಲೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಹಾಗೂ ದೊಡ್ಡ ದೊಡ್ಡ ಲಾರಿಗಳು ಕೂಡ ಸಂಚರಿಸುತ್ತಿವೆ, ಆದರೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಮಾತ್ರ ಇನ್ನೂ ಪ್ರಾರಂಭವಾಗಿಲ್ಲ. ಇದರಿಂದ ನಿತ್ಯ ಸಂಚರಿಸುವ ವಿದ್ಯಾರ್ಥಿಗಳಿಗೆ ಮಹಿಳೆಯರಿಗೆ ಸರಕಾರಿ ನೌಕರರಿಗೆ ಸಣ್ಣಪುಟ್ಟ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುವಂತಾಗಿದೆ.
ಕೇವಲ ಎರಡು ತಿಂಗಳಲ್ಲಿ ಸೇತುವೆಯ ದುರಸ್ತಿ ಮಾಡಿ ಕೊಡುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಆದರೆ ನಾಲ್ಕು ತಿಂಗಳು ಕಳೆಯುತ್ತಾ ಬಂದರೂ ಕೂಡ ಸೇತುವೆ ದುರಸ್ತಿ ಕಾರ್ಯ ಪೂರ್ಣಗೊಂಡಿಲ್ಲ. ಸೇತುವೆಯ ಮೇಲ್ಭಾಗದಲ್ಲಿ ಸಿಮೆಂಟ್ ರಸ್ತೆಯನ್ನು ಕೇವಲ 15 ದಿನಗಳಲ್ಲಿ ಪೂರ್ಣಗೊಳಿಸಿದ್ದು, ಎರಡು ಭಾಗದ ತಡೆಗೋಡೆಗಳ ನಿರ್ಮಾಣ ಕಾರ್ಯ ವಿಳಂಬವಾಗುತ್ತಿದೆ, ಇಂಥ ದೊಡ್ಡ ಸೇತುವೆಯ ತಡೆಗೋಡೆ ಕಾರ್ಯದಲ್ಲಿ ಕೇವಲ 3-4 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಗಾದರೆ ಸೇತುವೆಯ ದುರಸ್ತಿ ಪೂರ್ಣಗೊಳ್ಳೋದು ಹೇಗೆ ಸಾಧ್ಯ ಎನ್ನುತ್ತಾರೆ ಪ್ರಯಾಣಿಕರು.
ಪ್ರತಿನಿತ್ಯ ಸಿಂದಗಿಯಿಂದ ಅಫಜಲಪುರ ತಾಲೂಕಿಗೆ, ಅಫಜಲಪುರ ತಾಲೂಕಿನಿಂದ ಸಿಂದಗಿ, ಇಂಡಿ, ಆಲಮೇಲ ಭಾಗಕ್ಕೆ ಅನೇಕ ಜನ ನೌಕರರು, ವಿದ್ಯಾರ್ಥಿಗಳು, ವ್ಯಾಪಾರಸ್ಥರು, ಕೂಲಿ ಕಾರ್ಮಿಕರು ಸಂಚರಿಸುವುದರಿಂದ ಅವರಿಗೆ ತುಂಬಾ ತೊಂದರೆಯಾಗುತ್ತಿದೆ. ಹೀಗಾಗಿ ಗುತ್ತಿಗೆದಾರರು ಜನಸಾಮಾನ್ಯರ ಕಷ್ಟವನ್ನು ಅರಿತು ಮುತುವರ್ಜಿ ವಹಿಸಿ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಕೆಲಸವನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರ ಆಗ್ರಹವಾಗಿದೆ. ಈ ಕುರಿತು ಲೋಕೋಪಯೋಗಿ ಇಲಾಖೆಯು ಆದಷ್ಟು ಬೇಗನೆ ಸೇತುವೆ ದುರಸ್ತಿ ಮಾಡಿ ಜನರ ಕಷ್ಟಕ್ಕೆ ಸ್ಪಂದಿಸಬೇಕಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 