ಕಳಚಿದ ಹಿಪ್ಪರಗಿ ಬ್ಯಾರೇಜ್ ಗೇಟ್: ಸ್ಥಳಕ್ಕೆ ತಿಮ್ಮಾಪೂರ ಭೇಟಿ
Broken Hipparagi Barrage Gate: Thimmapur visits the site
ಜಮಖಂಡಿ 07: ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ನ 22 ನೇ ಗೇಟ್ ನೀರಿನ ರಭಸಕ್ಕೆ ಕಿತ್ತು ಹೋಗಿದೆ. ಕೂಡಲೇ ಗೇಟ್ ಅಳವಡಿಸಲು ಕ್ರಮ ಜರುಗಿಸಲಾಗುತ್ತದೆ. ರೈತರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು. ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ನ ಗೇಟ್ ಮಧ್ಯಾನ 1 ಗಂಟೆಯ ಸುಮಾರಿಗೆ ಕಳಚಿರುವ ಸುದ್ದಿ ತಿಳಿದಾಕ್ಷಣ ಜಿಲ್ಲಾಧಿಕಾರಿಗಳ ತಂಡದೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು,
ಗೇಟ್‌ನ್ನು ಅಳವಡಿಕೆಗೆ ಆಂಧ್ರ್ರದೇಶದ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿದೆ. ಸುಮಾರು 3 ರಿಂದ ನಾಲ್ಕು ಗಂಟೆಗಳಲ್ಲಿ ನೂತನ ಗೇಟ್ ಅಳವಡಿಸುತ್ತೇವೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ 0.65 ಅಥವಾ0.75 ಟಿಎಂಸಿ ಅಷ್ಟು ನೀರು ನದಿಪಾತ್ರಕ್ಕೆ ಹರಿದು ಹೋಗಲಿದೆ. ಸುಮಾರು 5 ಸಾವಿರ ಕ್ಯೂಸೆಕ್ ನೀರು ಹರಿಯುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದರು.
ರೈತರು ಆತಂಕ ಪಡಬೇಕಾದ ಸ್ಥಿತಿ ಇಲ್ಲ. ಮುಖ್ಯ ಇಂಜನೀಯರ್‌ಗಳು, ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಗೇಟ್ ಕಳಚಿದೆ ಎಂಬ ಸುದ್ದಿ ಕೇಳಿ ಆತಂಕ ಉಂಟಾಗಿತ್ತು. ಬಹಳಷ್ಟು ಪ್ರಮಾಣದಲ್ಲಿ ನೀರು ಹರಿದು ಹೋದರೆ ಜಲಾಶಯದ ಹಿಂಭಾಗದ ಗ್ರಾಮಗಳ ರೈತರಿಗೆ ತೊಂದರೆ ಆಗಬಹುದು ಎಂಬ ಆತಂಕವಿತ್ತು ಆದರೆ ಅಂದು ಕೊಂಡಷ್ಟು ನೀರು ಹರಿದು ಹೋಗುವದಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಸುಮಾರು 5 ಸಾವಿರ ಕ್ಯೂಸೆಕ್ ನೀರು ಹರಿದು ಹೋಗಲಿದೆ ಎಂದು ಹೇಳಿರುವದರಿಂದ ರೈತರು ಆತಂಕ ಪಡಬೇಕಿಲ್ಲ ಎಂದು ತಿಳಿಸಿದರು. ಅಧಿಕಾರಿಗಳಿಗೆ ಆದಷ್ಟು ಬೇಗನೇ ಗೇಟ್ ಅಳವಡಿಸುವಂತೆ ಆದೇಶ ನೀಡಿದ್ದೇನೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 