ಬೆಳಗಾವಿ ಬಸವೇಶ್ವರ ವೃತ್ತದಲ್ಲಿ ಕಂಚಿನ ಮೂರ್ತಿ ಪ್ರತಿಷ್ಠಾಪನೆ
Bronze statue installed at Basaveshwara Circle, Belgaum
ಬೆಳಗಾವಿ 20: ನಗರದ ಬಸವೇಶ್ವರ ವೃತ್ತದ ಉದ್ಯಾನವನದಲ್ಲಿ ಮಹಾನ ಮಾನವತಾವಾದಿ, ಜಗಜ್ಯೋತಿ ಬಸವಣ್ಣನವರ ನೂತನ ಕಂಚಿನ ಮೂರ್ತಿ ಪ್ರತಿಷ್ಠಾಪನೆಯನ್ನು ಹಿರಿಯರ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು. ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆಯ ಈ ಸತ್ಕಾರ್ಯದಲ್ಲಿ ಮುತುವರ್ಜಿ ವಹಿಸಿ ಶ್ರಮಿಸಿ ಅನುದಾನ ನೀಡಿದ ಶಾಸಕರಾದ ಅಭಯ ಪಾಟೀಲ, ತಮ್ಮ ಹಿತಾಸಕ್ತಿಯಿಂದ ಈ ಕಾರ್ಯ ಜರುಗುವಂತೆ ಮಾರ್ಗದರ್ಶನ ನೀಡಿ ಸಹಕಾರ ಮಾಡುತ್ತಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಕಾರಿ ಕಾರ್ಯಧ್ಯಕ್ಷರಾದ ಪ್ರಭಾಕರ ಕೋರೆ, ಬೆಳಗಾವಿಯ ಹಿರಿಯ ನ್ಯಾಯವಾದಿಗಳು ಸಮಾಜದ ಪ್ರಮುಖರಾದ ಎಮ್ ಬಿ ಜಿರಲಿ , ಮಹಾನಗರ ಪಾಲಿಕೆಯ ಪ್ರಥಮ ಪ್ರಜೆ ಮೇಯರ ಪ್ರೀತಿ ಕಾಮಕರ, ಉಪ ಮಹಾಪೌರರಾದ ಹಮಮಂತ ಕೊಂಗಾಲಿ, ವೀರಶೈವ ಮಹಾಸಭೆಯ ಜಿಲ್ಲಾ ಅಧ್ಯಕ್ಷರಾದ ರತ್ನಕ್ಕ ಬೆಲ್ಲದ, ಶಿವನಗೌಡ ಪಾಟೀಲ, ಬಿಜೆಪಿ ಮುಖಂಡ ಮಹಾಂತೇಶ ವಕ್ಕುಂದ,ಆರ್ ಎಸ್ ಪಾಟೀಲ, ಸೇರಿದಂತೆ ಬಸವಣ್ಣನವರ ಅಭಿಮಾನಿಗಳು, ಹಿರಿಯರು, ಪ್ರಮುಖರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 