ಎರಡು ವರ್ಷದಿಂದ ಸಹೋದರ ಆದಿತ್ಯ ರಾವ್ ಸಂಪರ್ಕದಲ್ಲಿಲ್ಲ: ಅಕ್ಷತ್ ರಾವ್
ಮಂಗಳೂರು, ಜ 22: ತಮ್ಮ ಸಹೋದರ ಆದಿತ್ಯ ರಾವ್, ಕಳೆದ 2 ವರ್ಷಗಳಿಂದ ಕುಟುಂಬದ ಸಂಪರ್ಕದಲ್ಲಿ ಇಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ ಸಹೋದರ ಅಕ್ಷತ್ ರಾವ್ ತಿಳಿಸಿದ್ದಾರೆ.
ಆದಿತ್ಯ ರಾವ್ ಪೊಲೀಸರಿಗೆ ಶರಣಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಗೆ ಇಬ್ಬರು ಗಂಡು ಮಕ್ಕಳು. ಆದಿತ್ಯ ಎಂಬಿಎ, ಬಿಇ ಪದವಿಧರನಾಗಿದ್ದಾನೆ. ಕಳೆದ 2 ವರ್ಷಗಳಿಂದ ನಮ್ಮ ಕುಟುಂಬ ಆತನಿಂದ ಸಂಪರ್ಕ ಕಳೆದುಕೊಂಡಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಹಾಕುವುದಾಗಿ ಹುಸಿ ಕರೆ ಮಾಡಿದ್ದಾಗಲೇ ಆತನಿಗೆ ಬುದ್ಧಿವಾದ ಹೇಳಿದ್ದೆವು. ನಮ್ಮ ತಂದೆ ಹಲವು ಆತನನ್ನು ಸರಿಪಡಿಸಲು ಪ್ರಯತ್ನಿಸಿದ್ದಾರೆ. ಆದರೆ, ಆತ ಸರಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅವನ ಈ ಕೃತ್ಯಕ್ಕೆ ನಾವು ಹೊಣೆಗಾರರಲ್ಲ. ಅಲ್ಲದೇ, ಈ ಕುರಿತು ತಿಳಿದುಕೊಳ್ಳುವ ಯಾವುದೇ ಆಸಕ್ತಿಯೂ ನಮಗಿಲ್ಲ. ಹುಸಿ ಬಾಂಬ್ ಕರೆಗೆ ಸಂಬಂಧಿಸಿದಂತೆ ಆತ ಜೈಲಿಗೆ ಸೇರಿದ್ದ, ಜಾಮೀನು ಕೊಡಿಸುವ ಯಾವುದೇ ಪ್ರಯತ್ನ ನಾವು ಮಾಡಿಲ್ಲ. ಕೊನೆಯದಾಗಿ ನಮ್ಮ ತಾಯಿ ತೀರಿಹೋದಾಗ ವಿಷಯ ತಿಳಿಸಲು ಕರೆ ಮಾಡಿದ್ದು ಅಷ್ಟೇ. ನಮ್ಮ ತಂದೆ ಆತ ಮನೆಗೆ ಬರುವುದು ಬೇಡವೆಂದು ಹೇಳಿದ್ದರು. ಅಂದಿನಿಂದ ಆತ ಮನೆಗೆ ಬಂದಿಲ್ಲ ಎಂದು ತಿಳಿಸಿದರು.
ಆತನಿಗೆ ನಮ್ಮಿಂದ ಯಾವುದೇ ರೀತಿಯ ಬೆಂಬಲವಿಲ್ಲ. ಆತನ ಬಗ್ಗೆ ನಮಗೂ ಭಯವಿದೆ ಎಂದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 