ಬಳ್ಳಾರಿ, ಜು.08: ಅರಣ್ಯ, ಪರಿಸರ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಬುಧವಾರ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ವಿಷಯಗಳ ಕುರಿತು ಚಚರ್ಿಸಲಾಯಿತು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಹಾಗೂ ಸಿಬ್ಬಂದಿಗಳು ಸಚಿವ ಆನಂದಸಿಂಗ್ ಅವರನ್ನು ಸನ್ಮಾನಿಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ನಗರದ ಪ್ರಾಧಿಕಾರದ ಆಯುಕ್ತರಾದ ಈರಪ್ಪ ಬಿರಾದಾರ, ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರಾದ ರವಿಶಂಕರ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.