ನವದೆಹಲಿ, ಜ 29 : ಇದೇ 31 ರಂದು ಸಂಸತ್ತಿನ ಬಜೆಟ್ ಅಧಿವೇಶನ ಆರಂಭಗೊಳ್ಳಲಿರುವ ಹಿನ್ನಲೆಯಲ್ಲಿ ಅಧಿವೇಶನದಲ್ಲಿ ಸುಗಮ ಕಲಾಪ ಖಾತರಿ ಪಡಿಸುವ ನಡೆಸುವ ಸಂಬಂಧ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರುವಾರ ಸರ್ವಪಕ್ಷಗಳ ಸಭೆ ಆಯೋಜಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡನೆಯಾಗಲಿದೆ.
ಫೆಬ್ರವರಿ 1 ರಂದು ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2020-21ನೇ ಸಾಲಿನ ಸಾಮಾನ್ಯ ಬಜೆಟ್ ಮಂಡಿಸಲಿದ್ದಾರೆ.
ಸ್ಪೀಕರ್ ಓಂ ಬಿರ್ಲಾ ಸಂಸತ್ತಿನ ಲೈಬ್ರರಿ ಕಟ್ಟಡದಲ್ಲಿ ಗುರುವಾರ ಸಂಜೆ 6.30ಕ್ಕೆ ಸರ್ವಪಕ್ಷಗಳ ಸಭೆ ಕರೆದಿದ್ದಾರೆ ಎಂದು ಲೋಕಸಭಾ ಕಾರ್ಯಾಲಯ ತಿಳಿಸಿದೆ.