ಹಿಂದುಳಿದ ವರ್ಗಗಳ ಭರವಸೆಗಳಿಗೆ ನಿರಾಸೆ ಮೂಡಿಸಿದ ಬಜೆಟ್ : ರವಿ ದಂಡಿನ
ಗದಗ 07 : ಸುಧೀರ್ಘ ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16 ನೇ ಬಜೆಟ್‌ನಲ್ಲಿ ರಾಜ್ಯ ಜನರು ಸಾಕಷ್ಟು ಭರವಸೆಯನ್ನು ಇಟ್ಟುಕೊಂಡಿದ್ದರು. ಆದರೆ. ಅವರ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಅಭಿವೃದ್ದಿಯ ಯೋಜನೆಗಳಿಗೆ ಅಧ್ಯತೆ ನೀಡದಿರುವುದು. ಹಿಂದುಳಿದ ವರ್ಗಗಳ ಬೇಡಿಕೆಗಳನ್ನು ಕಡೆಗಣಿಸಿರುವುದು ಮತ್ತು ನೀರಾವರಿ ಯೋಜನೆಗಳಿಗೆ ಆಧ್ಯತೆ ನೀಡದಿರುವುದು ನಿರಾಶೆ ಮೂಡಿಸಿದೆ. ಗದಗ ಜಿಲ್ಲೆಗೆ ಹೊಸ ಕೈಗಾರಿಕೆಗಳು, ಅಭಿವೃದ್ದಿ ಯೋಜನೆಗಳು ಸಿಗದೆ ಇರುವದು ನೋವು ತಂದಿರುವದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಿರಾಶದಾಯಕವಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮಾಜಿ ರಾಜ್ಯ ಕಾರ್ಯದರ್ಶಿ ರವಿ ದಂಡಿನ ಅವರು ಅಭಿಪ್ರಾಯ ವ್ಯಕ್ತ ಪಡೆಸಿದ್ದಾರೆ.