ಅಪರಾಧ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ಎ.ಸಿ.ಪಿ. ಮಂಟೂರ
Building a crime-free society is the responsibility of us all: ACP Mantur
ಲೋಕದರ್ಶನ ವರದಿ
ಬೆಳಗಾವಿ 29: ಅಪರಾಧ ಮುಕ್ತ ಸಮಾಜದ ನಿರ್ಮಾಣ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ನಮ್ಮೆಲ್ಲರ ಕರ್ತವ್ಯ. ಇಂದಿನ ಡಿಜಿಟಲ್ ಜಗತ್ತಿನಲ್ಲಿ ಎಚ್ಚರಿಕೆಯೇ ಮೊದಲ ರಕ್ಷಣೆ. ನಾವು ಜಾಗೃತರಾಗಿದ್ದಾಗ ಮಾತ್ರ ಸೈಬರ್ ಸುರಕ್ಷತೆ ಹಾಗೂ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ಬೆಳಗಾವಿ ನಗರ ಸೈಬರ್ ಪೊಲೀಸ್ ಠಾಣೆಯ ಎಸಿಪಿ ಬಾಳಪ್ಪ ಮಂಟೂರ ಅಭಿಪ್ರಾಯಪಟ್ಟರು.
ಅವರು ಇಂದು ನಾಗನೂರು ರುದ್ರಾಕ್ಷಿ ಮಠದ ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಅಗಮ್ಯ ಸೈಬರ್ ಟೆಕ್, ಸ್ಟೀಮ್. ಎಚ್. ತರಬೇತಿ ಮತ್ತು ಸಂಶೋಧನಾ ಪ್ರತಿಷ್ಠಾನ, ಎಸ್.ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಕಾಲೇಜಿನ ಸೈಬರ್ ಸುರಕ್ಷತೆಯ ಸಿಒಇ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ "ಅಗಮ್ಯ ಸೈಬರ್ ಟೆಕ್" ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಸೈಬರ್ ಅಪರಾಧಿಗಳು ಸಮಾಜದಲ್ಲಿನ ಮುಗ್ಧ ಜನರ ಖಾತೆಯಲ್ಲಿರುವ ಹಣ ದೋಚುವುದಲ್ಲದೆ ಅವರ ಖಾಸಗಿ ಫೋಟೋ, ವಿಡಿಯೋಗಳನ್ನು ಕಳುವು ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅವಮಾನಕ್ಕೀಡು ಮಾಡುತ್ತಾರೆ. ಇದರಿಂದ ಅವಮಾನಗೊಂಡು ಅನೇಕ ಮುಗ್ಧ ಜನ ತಮ್ಮ ಜೀವ ಕಳೆದುಕೊಳ್ಳುತ್ತಾರೆ. ಕಾರಣ ಇಂತಹ ವಂಚಕರ ಸುಳಿವು ಪಡೆದು ಡಿಜಿಟಲ್ ಸಾಕ್ಷಿ ಸಂಗ್ರಹಿಸಿ, ಅವರನ್ನು ಕೋರ್ಟ್ ಗಳಿಗೆ ಹಾಜರುಪಡಿಸುವುದರ ಮೂಲಕ ಸೈಬರ್ ಅಪರಾಧಿಗಳಿಗೆ ತಕ್ಕ ಶಿಕ್ಷೆ ಕೊಡಿಸುವುದು ಪೊಲೀಸರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 