ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ
Building a healthy society is possible through the consumption of nutritious food
ಗಜೇಂದ್ರಗಡ, ಸೆ. 22: ಅಪೌಷ್ಟಿಕತೆ ನಿವಾರಣೆಗೆ ಪೌಷ್ಟಿಕಾಂಶವುಳ್ಳ ಆಹಾರ ಸೇವನೆ ಅತ್ಯಗತ್ಯ. ಪ್ರತಿಯೊಬ್ಬರೂ ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಆಡಳಿತ ವೈದ್ಯಾಧಿಕಾರಿ ಡಾ. ಬಸನಗೌಡ ಪವಾಡಿಗೌಡ ಹೇಳಿದರು.
ಗಜೇಂದ್ರಗಡ ತಾಲ್ಲೂಕಿನ ಸರ್ಜಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಶಾಂತಗೇರಿ ವಲಯ ಮಟ್ಟದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಹಾಗೂ ಗರ್ಭಿಣಿಯರ ಸೀಮಂತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೌಷ್ಟಿಕ ಆಹಾರವು ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಾಗಿದೆ. ಮಕ್ಕಳಿಂದ ಹಿಡಿದು ಗರ್ಭಿಣಿಯರು, ಬಾಣಂತಿಯರು ಹಾಗೂ ಕಿಶೋರಿಯರು ಪೌಷ್ಟಿಕ ಆಹಾರ ಸೇವನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಮಾತನಾಡಿ, ದೇಹದ ಆರೋಗ್ಯಕ್ಕೆ ಸಮತೋಲಿತ ಆಹಾರ ಅತ್ಯಗತ್ಯ. ಆಹಾರದ ಕೊರತೆಯಷ್ಟೇ ಅಲ್ಲದೆ ಅತಿಯಾದ ಪೌಷ್ಟಿಕಾಂಶ ಸೇವನೆಯೂ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಅತಿಯಾದ ಆಹಾರ ಸೇವನೆಯಿಂದ ದೇಹದ ತೂಕ ಹೆಚ್ಚಾಗಿ ಬೊಜ್ಜು, ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಬಹುದು ಎಂದು ತಿಳಿಸಿದರು.
ಕೆಲವು ವಿಟಮಿನ್ಗಳು ದೇಹದಲ್ಲಿ ಅತಿಯಾಗಿ ಸಂಗ್ರಹವಾದರೆ ಮೂತ್ರಪಿಂಡ ಹಾಗೂ ಯಕೃತ್ತಿನ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಮತ್ತೊಂದೆಡೆ, ಅಪೌಷ್ಟಿಕತೆಯಿಂದ ರೋಗನಿರೋಧಕ ಶಕ್ತಿ ಕುಂಠಿತಗೊಂಡು ಸೋಂಕುಗಳು ಬೇಗನೆ ತಗಲಬಹುದು.
ನಿರಂತರ ಆಯಾಸ, ನಿಶ್ಯಕ್ತಿ ಹಾಗೂ ತಲೆಸುತ್ತುವಿಕೆ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಕಬ್ಬಿಣಾಂಶದ ಕೊರತೆಯಿಂದ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗಿ ರಕ್ತಹೀನತೆ ಉಂಟಾಗುತ್ತದೆ ಎಂದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 