ಪೌರತ್ವ ಶಿಕ್ಷಣದಿಂದ ಉತ್ತಮ ನಾಗರಿಕರ ನಿರ್ಮಾಣ: ಪ್ರೊ.ವಿಜಯಾ ಕೋರಿಶೆಟ್ಟಿ
Building better citizens through citizenship education: Prof. Vijaya Korishetty
ಲೋಕದರ್ಶನ ವರದಿ
ವಿಜಯಪುರ 03 : ಉತ್ತಮ ನಾಗರಿಕರ ನಿರ್ಮಾಣದಲ್ಲಿ ಪೌರತ್ವ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಅರಿವು ಹೊಂದುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ನಿಕಾಯದ ಡೀನ್ ಪ್ರೊ.ಸಕ್ಪಾಲ ಹೂವಣ್ಣ ಮಾತನಾಡಿ, ಪ್ರಜಾಪ್ರಭುತ್ವದ ಯಶಸ್ಸಿಗೆ ಜವಾಬ್ದಾರಿಯುತ ನಾಗರಿಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಅಶೋಕಕುಮಾರ ಸುರಪುರ ಮಾತನಾಡಿ, ಶಿಬಿರದ ಉದ್ದೇಶಗಳನ್ನು ವಿವರಿಸಿ, ಭಾವೈಕ್ಯತೆ ಹಾಗೂ ಸಮೂಹ ಜೀವನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರೊ.ಯು.ಕೆ.ಕುಲಕರ್ಣಿ, ಡಾ.ಪ್ರಕಾಶ ಸಣ್ಣಕ್ಕನವರ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು, ಮತ್ತಿತರು ಭಾಗವಹಿಸಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 