ಲಂಡನ್ 08: ಐಲರ್ೆಂಡ್ ವಿರುದ್ಧದ ಟಿ20 ಪಂದ್ಯದ ವೇಳೆ ಗಾಯ ಮಾಡಿಕೊಂಡಿದ್ದ ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ.
ಪಂದ್ಯದಲ್ಲಿ ಬುಮ್ರಾ ಅವರ ಎಡ ಕೈಗೆ ಗಾಯವಾಗಿತ್ತು. ಈ ಗಾಯದಿಂದ ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಲಾಡ್ರ್ಸ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎಂದು ತಂಡದ ಬೌಲಿಂಗ್ ಕೋಚ್ ಭರತ್ ಅರುಣ್ ತಿಳಿಸಿದ್ದಾರೆ.
ಬುಮ್ರಾ ಕ್ಷಮತೆಯೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಆದರೆ ಅವರನ್ನು ಈ ಪರಿಸ್ಥಿತಿಯಲ್ಲಿ ಆಟಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ಕೈಗೆ ಹಾಕಿದ ಪ್ಲಾಸ್ಟರ್ ಮೊದಲಿಗೆ ತೆಗೆಯಬೇಕಾಗಿದೆ. ಆ ನಂತರ ತಂಡಕ್ಕೆ ಆಯ್ಕೆ ಮಾಡಲಾಗುವುದು ಎಂದು ಭರತ್ ಅರುಣ್ ತಿಳಿಸಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬುಮ್ರಾ ಅವರ ಗಾಯ ನಿರೀಕ್ಷೆಗಿಂತಲೂ ನಿಧಾನವಾಗಿ ಶಮನಗೊಳ್ಳುತ್ತಿರುವ ಕಾರಣ ಅವರು ಲಾಡ್ರ್ಸ ಟೆಸ್ಟ್ ಗೆ ಲಭ್ಯರಿರುವುದಿಲ್ಲ ಎಂದು ಹೇಳಿದೆ.