ಬೆಂಗಳೂರು, ಮೇ 4,ನಗರದ ಮೆಜೆಸ್ಟಿಕ್ ಬಸ್ಸು ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಫ್ಲಾಟ್ ಫಾರಂ ನಂಬರ್ 15ರಲ್ಲಿ ಸಂಭವಿಸಿದೆ.ಕೊಪ್ಪಳ ಘಟಕ ಬಸ್ಸು ಇದಾಗಿದ್ದು, ಲಾಕ್‍ಡೌನ್ ಸಡಿಲಿಕೆಯಾದ ಪರಿಣಾಮ ಸಾವಿರಾರು ಜನರು ಮೆಜೆಸ್ಟಿಕ್ ಬಸ್ಸು ನಿಲ್ದಾಣದಲ್ಲಿ ಸೇರಿಕೊಂಡಿದ್ದರು. ಹೀಗಾಗಿ ಜನದಟ್ಟಣೆಯಾದ ಪರಿಣಾಮ ಬಸ್ಸು ನಿಲ್ದಾಣದಲ್ಲಿ ಹೊರಡುತ್ತಿದ್ದಾಗ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.ಡಿಕ್ಕಿಯ ರಭಸಕ್ಕೆ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಪರಾರಿಯಾಗಿದ್ದಾನೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.