ಬೆಳಗಾವಿ 24: ಭಾಷಾ ಸಂಘರ್ಷದಿಂದ ಶಾಂತಿ, ನೆಮ್ಮದಿ, ಉದ್ಯೋಗಕ್ಕೆ ಸಮಸ್ಯೆಯಾಗಲಿದೆ. ಕಾನೂನು ಸುವ್ಯವಸ್ಥೆಯ, ಶಾಂತಿ ಸೌಹಾರ್ದತೆಯನ್ನು ಕಾಪಾಡಬೇಕಿದೆ. ಗಡಿಭಾಷೆ ಸಂಘರ್ಷ ಮರುಕಳಿಸದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಇದು ಇಬ್ಬರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು. ಇದರಿಂದ ಬೆಳಗಾವಿಯ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ, ಬಸ್ ನಿರ್ವಾಹಕನ ವಿರುದ್ಧ ಪೋಸ್ಕೋ ಕೇಸ್ ದಾಖಲು ಆಗಬಾರದಿತ್ತು. ಪೊಲೀಸರಿಂದ ತಪ್ಪಾಗಿದೆ ಇದನ್ನು ಸರಿಪಡಿಸಲು ಅವಕಾಶವಿದೆ. ಮರು ಪರಿಶೀಲನೆ ಆಗಬೇಕಿದೆ ಎಂದು ಹೇಳಿದರು..
ಶಿವಸೇನೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಬೇಡಿಕೆಯನ್ನು ಖಂಡಿಸಿದ ಅವರು, ಎರಡು ರಾಜ್ಯಗಳ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ತೀವ್ರ ನಷ್ಟ ಉಂಟಾಗಲಿದೆ ಎಂದರು. .
ನಾಳೆ ನಡೆಯಲಿರುವ ಕರವೇ ಬೆಳಗಾವಿ ಚಲೋ ಪ್ರತಿಭಟನೆ ಕೈಬಿಡುವಂತೆ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.