ನಿಯಂತ್ರಣ ತಪ್ಪಿ ಪ್ಲಾಟ ಪಾರ್ಮ ಮೇಲೆ ಚಲಿಸಿ ಬೇಕರಿ ಸ್ಟಾಲ್‌ಗೆ ಬಸ್ ಡಿಕ್ಕಿ
Bus loses control, runs over flat pavement, crashes into bakery stall
ಲೋಕದರ್ಶನ ವರದಿ
ಹಾವೇರಿ 01 : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬೆಳ್ಳಂಬೆಳಿಗ್ಗೆ ಅವಗಡ ಸಂಭವಿಸಿದ್ದು, ಹಾವೇರಿ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ ಪಾರ್ಮ ಮೇಲೆ ಚಲಿಸಿ ಬೇಕರಿ ಸ್ಟಾಲ್‌ಗೆ ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಗಾಯಗೊಂಡಿದ್ದ ಎರಡು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.ಮೃತ ಬಾಲಕನನ್ನು ಸವಣೂರು ಪಟ್ಟಣದ 2 ವರ್ಷದ ಹಜರತ್ ಅಲಿ ಎಂದು ಗುರುತಿಸಲಾಗಿದೆ.ಮೂವರಿಗೆ ಗಾಯಗಳಾಗಿವೆ.ಹಾವೇರಿಯಿಂದ ಲಕ್ಷ್ಮೇಶ್ವರಕ್ಕೆ ತಡೆರಹಿತವಾಗಿ ಸಂಚರಿಸುವ ಬಸ್ ಈ ರೀತಿ ಅಪಘಾತವಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಮೂವರು ಗಾಯಳುಗಳನ್ನು ಅಂಬ್ಯುಲನ್ಸ್ ಮೂಲಕ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.ಗಾಯಾಳು ಕುಟುಂಬಗಳ ಸದಸ್ಯರ ಆಕ್ರಂದನ ಮನ ಮಿಡಿಯುವಂತಿತ್ತು. ಘಟನೆಯಿಂದಾಗಿ ಹಾವೇರಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಘಟನೆಯಾಗುತ್ತಿದ್ದಂತೆ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.ಗಂಭೀರವಾಗಿ ಗಾಯಗೊಂಡಿದ್ದ ಹಜರತ್ ಅಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.ಇನ್ನುಳಿದ ಮೂವರು ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ವಾಸುದೇವ( 44),ಹರ್ಷಾ( 6),ಕಾವ್ಯಾಂಜಲಿ (39) ಎಂಬುವರಿಗೆ ಗಾಯಗೊಂಡಿದ್ದರು.ಗಾಯಾಳುಗಳು ಬಂಕಾಪುರ ಪಟ್ಟಣದ ನಿವಾಸಿಗಳು.ಬಸ್ ಬಂದ ತಕ್ಷಣ ಯಾವ ಊರಿಗೆ ಬಸ್ ತೆರಳಲಿದೆ ಅಂತ ಬೋರ್ಡ್ ನೋಡಲು ಹೋಗಿದ್ದವರ ಮೇಲೆ ಏಕಾಏಕಿ ಬಸ್ ಗುದ್ದಿದ ಪರಿಣಾಮ ದುರ್ಘಟನೆ ನಡೆದಿದೆ ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 