ಮಾರ್ಗದಲ್ಲಿ ಮತ್ತೆ ಬಸ್ ಸಂಚಾರ
Bus services resume on the route
ಲೋಕದರ್ಶನ ವರದಿ
ದಾಂಡೇಲಿ: ಪ್ರಧಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗವೇಗಾಳಿ ಹಾಗೂ ಬಾಮಣಗಿ ಗ್ರಾಮದ ಸಾರ್ವಜನಿಕರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಸಾರಿಗೆ ಸಂಸ್ಥೆಯ ಬಸ್ ಸೇವೆ ಸೋಮವಾರದಿಂದ ಪುನರಾರಂಭಗೊಂಡಿದೆ. ಬಸ್ ಸಂಚಾರ ಪುನರಾರಂಭಗೊಂಡ ಹಿನ್ನೆಲೆಯಲ್ಲಿ ಸಂತಸಗೊಂಡ ಗ್ರಾಮಸ್ಥರು ಬಸ್ಗೆ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮ ವ್ಯಕ್ತಪಡಿಸಿದರು. ಹಲವು ದಿನಗಳಿಂದ ಈ ಮಾರ್ಗದಲ್ಲಿ ಬಸ್ ಸಂಚಾರ ಇಲ್ಲದ ಕಾರಣ ಗ್ರಾಮಗಳ ಶಾಲಾ ವಿದ್ಯಾರ್ಥಿಗಳು ದಾಂಡೇಲಿಗೆ ತೆರಳಿ ಬರಲು ತೊಂದರೆ ಅನುಭವಿಸುತ್ತಿದ್ದರು. ಗ್ರಾಮಸ್ಥರ ಸಮಸ್ಯೆಯನ್ನು ಅರಿತು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಗಾವಡ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಬಸ್ ಸೇವೆ ಪುನರಾರಂಭಕ್ಕೆ ಪ್ರಯತ್ನಿಸಿದ್ದರು. ಅವರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಇದೀಗ ಬಸ್ ಸಂಚಾರವನ್ನು ಪುನರಾರಂಭಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 