ಕರ್ನಾಟಕ ಮತ್ತು ಮಹಾರಾಷ್ಟ್ರ ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತ

Bus traffic between the two states of Karnataka and Maharashtra is suspended

ಮುಂಬೈ 23: ಬೆಳಗಾವಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತವಾಗಿದೆ. ಈ ಬಗ್ಗೆ ಮಹಾರಾಷ್ಟ್ರ ಸರ್ಕಾರವೇ ಮಾಹಿತಿ ನೀಡಿದೆ.

ಶುಕ್ರವಾರ ಚಿತ್ರದುರ್ಗದಲ್ಲಿ ಕನ್ನಡ ಪರ ಕಾರ್ಯಕರ್ತರು ಬೆಂಗಳೂರಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಚಾಲಕ ಭಾಸ್ಕರ್ ಜಾಧವ್ ಮೇಲೆ ಹಲ್ಲೆ ನಡೆಸಿ, ಎಂಎಸ್‌ಆರ್‌ಟಿಸಿ ಬಸ್ ಮೇಲೆ ದಾಳಿ ಮಾಡಿದ ನಂತರ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಕರ್ನಾಟಕಕ್ಕೆ ರಾಜ್ಯ ಸಾರಿಗೆ ಬಸ್‌ಗಳನ್ನು ಸ್ಥಗಿತಗೊಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆದಿರುವ ಘಟನೆಗಳ ಕುರಿತಂತೆ ಕರ್ನಾಟಕ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳುವವರೆಗೆ ಮತ್ತು ನಮ್ಮ ಆಡಳಿತದೊಂದಿಗೆ ಚರ್ಚೆಯಲ್ಲಿ ತೊಡಗುವವರೆಗೆ, ರಾಜ್ಯದಿಂದ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್‌ನಾಯಕ್ ಹೇಳಿದ್ದಾರೆ. 

ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ ನಿರ್ವಾಹಕ ಮತ್ತು ಚಾಲಕ ಮೇಲಿನ ಹಲ್ಲೆ ಪ್ರಕರಣದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬಸ್‌ಗಳ ಸಂಚಾರ ವ್ಯತ್ಯಯವಾಗಿದೆ. ಶನಿವಾರ ಸಂಜೆ 7ರ ಬಳಿಕ ಎರಡೂ ಕಡೆಯ ಬಸ್‌ಗಳ ಸಂಚಾರ ಗಡಿಯವರೆಗೆ ಮಾತ್ರ ಸೀಮಿತಗೊಂಡಿದೆ.

ಹಲ್ಲೆಗೆ ಸಂಬಂಧಿಸಿದಂತೆ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ಕಂಡಕ್ಟರ್ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಲಾಗಿದೆ.