ಉಗಾರ ಪುರಸಭೆ ವಾರ್ಡ್ ನಂ-15 ಕ್ಕೆ ಉಪ ಚುನಾವಣೆ ದಿನಾಂಕ ನಿಗದಿ:ತಹಶಿಲ್ದಾರ ರವೀಂದ್ರ ಹಾದಿಮನಿ
By-election date fixed for Ugar Municipality Ward No. 15: Tahsildar Ravindra Hadimani
ಕಾಗವಾಡ 25: ತಾಲ್ಲೂಕಿನ ಉಗಾರ ಪುರಸಭೆ ವ್ಯಾಪ್ತಿಯ ವಾರ್ಡ್ ನಂಬರ್ -15 ರಲ್ಲಿ ವಾರ್ಡ್ ಸದಸ್ಯರಾಗಿದ್ದ ಸುಜಯ್ ರಾಜಾರಾಮ್ ಫರಾಕಟ್ಟೆ ಅವರು ದಿನಾಂಕ 16-11-2024 ರಂದು ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣಾ ದಿನಾಂಕ ನಿಗದಿಯಾಗಿದೆ.
ಉಗಾರ ಪುರಸಭೆ ವಾರ್ಡ್ ನಂ-15 ಕ್ಕೆ ನಾಮಪತ್ರ ಸಲ್ಲಿಸಲು ದಿ. 29. ಮಂಗಳವಾರ,ನಾಮಪತ್ರ ಸಲ್ಲಿಸಲು ಕೊನೆಯ ದಿ. 05. ಮಂಗಳವಾರ, ನಾಮಪತ್ರ ಪರೀಶೀಲಿಸುವ ದಿ.06 ಬುಧವಾರ,ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 08 ಶುಕ್ರವಾರ, ಮತದಾನ ಅವಶ್ಯಕವಿದ್ದರೆ ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ 17 ಭಾನುವಾರ ಬೆಳಿಗ್ಗೆ 7.00 ಗಂಟೆಯಿಂದ ಸಾಯಂಕಾಲ 5.00 ಗಂಟೆಯವರೆಗೆ ಹಾಗೂ ಮರು ಮತದಾನ ಅವಶ್ಯವಿದ್ದಲ್ಲಿ ಮತದಾನ ನಡೆಸಬೇಕಾದ ದಿನಾಂಕ ಮತ್ತು ದಿನ 19. ಮಂಗಳವಾರ ಸಮಯ ಬೆಳಿಗ್ಗೆ 7.00 ಗಂಟೆಯಿಂದ ಸಾಯಂಕಾಲ 5.00 ಯವರೆಗೆ ,ಮತಗಳ ಎಣಿಕೆಯ ದಿನಾಂಕ ಮತ್ತು ದಿನ 20- ಬುಧವಾರ (ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ) ನಡೆಸಲಾಗುತ್ತದೆ.
ಈ ಉಪ ಚುನಾವಣೆಗೆ ಸದಾಚಾರ ಸಂಹಿತೆಯು ದಿನಾಂಕ 29/07/2025 ರಿಂದ ದಿ. 20 ರವರೆಗೆ ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಮತ್ತು ಉಪಚುನಾವಣೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನೇಮಕ ಮಾಡಲಾಗಿದೆ.ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ನೀತಿ ಸಂಹಿತೆ ಬಗ್ಗೆ ಚರ್ಚಿಸಲಾಯಿತು ಎಂದು ತಹಶಿಲ್ದಾರ ರವೀಂದ್ರ ಹಾದಿಮನಿ ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 