ಬ್ಯಾಡಗಿ: ಕೋರ್ಟ್ ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ
Byadagi: Lawyers protest by boycotting court proceedings
ಬ್ಯಾಡಗಿ 07: ಅಥಣಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಅವರ ಸಿಬ್ಬಂದಿ ನ್ಯಾಯವಾದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಮೇಲೆಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಕೋರ್ಟ್ ಕಲಾಪ ಬಹಿಷ್ಕರಿಸಿ ಪಟ್ಟಣದಲ್ಲಿಯ ನ್ಯಾಯಾಲಯದ ಆವರಣದಿಂದ ಪಾದಯಾತ್ರೆಯ ಮೆರವಣಿಗೆ ಮೂಲಕ ತಹಶೀಲ್ದಾರರ ಕಾರ್ಯಾಲಯದವರೆಗೆ ಆಗಮಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.ತಾಲೂಕಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರಿ್ಸ.ಶಿಡೇನೂರ ಮಾತನಾಡಿ ಕಳೆದ ಐದು ದಿನಗಳ ಹಿಂದೆಯಷ್ಟೇ ಅಥಣಿ ನಗರದ ಪೊಲೀಸ್ ಅಧಿಕಾರಿಗಳು ವಿನಾಕಾರಣ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅಥಣಿಯ ವಕೀಲರ ಮೇಲೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ.
ಈ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದರೂ ಸಹಿತ ಅಲ್ಲಿನ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಈ ಘಟನೆಯನ್ನು ತಾಲೂಕಾ ವಕೀಲರ ಸಂಘ ಸಂಪೂರ್ಣವಾಗಿ ಖಂಡಿಸುತ್ತದೆ. ಕೂಡಲೇ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳು ಹಲ್ಲೆಗೈದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಇಲಾಖೆಯ ತನಿಖೆ ಕೈಗೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರುಪ್ರತಿಭಟನೆಯಲ್ಲಿ ತಾಲೂಕಾ ನ್ಯಾಯವಾದಿಗಳು ಸಂಘದ ಪದಾಧಿಕಾರಿಗಳಾದ ಜಿ.ಬಿ.ಯಲಗಚ್ಚ, ಎಚ್.ಜಿ.ಮುಳಗುಂದ, ಎಂ.ಎಸ್.ಕುಮ್ಮೂರ, ಬಿ.ಎಸ್.ಕುಲಕರ್ಣಿ, ಮಂಜುಳಾ ಜಿಗಳಿ, ಎಸ್.ಎಚ್.ಕಾಟೇನಹಳ್ಳಿ, ಜಿ.ಎನ್.ಹುಚ್ಚೇರ, ಎಸ್.ಪಿ.ಪೂಜಾರ, ಎಂ.ಎ.ಮುಲ್ಲಾ, ಎಚ್.ಆರ್.ಲಮಾಣಿ, ಎಂ.ಜಿ.ಹಿರೇಮಠ, ಎಂ.ಎ.ಮಾಳಿ ಸೇರಿದಂತೆ ಇತರರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 