ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿ ಮಿತಿ ಮರುನಿಗದಿ ಪರೀಶೀಲನೆ : ಸಚಿವ ಬಿ.ಎಸ್.ಸುರೇಶ್
Byndur Town Panchayat Area Limit Rescheduled Review: Minister B.S. Suresh
ಬೆಳಗಾವಿ, ಸುವರ್ಣ ವಿಧಾನಸೌಧ ಡಿ.12: ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೆಲವು ಪ್ರದೇಶಗಳನ್ನು ಕೈಬಿಡುವಂತೆ ಕೋರಿ ಹಲವು ಮನವಿಗಳು ಸ್ವೀಕೃತವಾಗಿವೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಕೆಲವು ಪ್ರದೇಶಗಳನ್ನು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಿಂದ ಕೈಬಿಡುವ ಸಮರ್ಕತೆಯನ್ನು ಪರೀಶೀಲಿಸಲು ಮಾಹಿತಿ ಕೋರಲಾಗಿದೆ. ಮಾಹಿತಿ ದೊರೆತ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್‌ಅವರು ತಿಳಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬೈಂದೂರು ಕ್ಷೇತ್ರದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಿತಿಯನ್ನು ಮರುನಿಗದಿಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಸದನದಲ್ಲಿ ಉತ್ತರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 