ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಸಿ. ನಿಂಗಪ್ಪ ಮೂರನೇ ಬಾರಿಗೆ ಆಯ್ಕೆ
C. Ningappa elected as District President of Primary School Teachers Association for the third time
ಬಳ್ಳಾರಿ 21: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ 2026-31ನೇ ಸಾಲಿನ ಚುನಾವಣೆಯಲ್ಲಿ ಸಿ. ನಿಂಗಪ್ಪ ಅವರು ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.ಈ ಕುರಿತು ಚುನಾವಣಾಧಿಕಾರಿ ಏಸಯ್ಯ ಪ್ರಕಟಣೆ ನೀಡಿದ್ದು, ನಿನ್ನೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಗುಂಡಪ್ಪನವರ ನಾಗರಾಜ, ಉಪಾಧ್ಯಕ್ಷರಾಗಿ ಪರಶುರಾಮ ಚೌಕಳಿ, ಶಾಂತಕುಮಾರಿ ಎಂ. ಹಾಗೂ ಬಸವನಗೌಡ ಅವರು ಖಜಾಂಚಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.ಸಿ. ನಿಂಗಪ್ಪ ಅವರು ನಿರಂತರವಾಗಿ ಮೂರನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಶಿಕ್ಷಕರ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ.ಇನ್ನುಳಿದಂತೆ ಎರಡು ಸಂಘಟನಾ ಕಾರ್ಯದರ್ಶಿ ಹಾಗೂ ಎರಡು ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಮುಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೇಮಕ ಮಾಡಲಾಗುವುದು ಎಂದು ನಿಂಗಪ್ಪ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 