ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ
C.C. MLA Vishwas Vaidya Bhoomi Pooja for road works
ಲೋಕದರ್ಶನ ವರದಿ
ಸವದತ್ತಿ 20: ತಾಲೂಕಿನ ಕುರುವಿನಕೊಪ್ಪ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಯೋಜನೆಯಡಿ ಮಂಜೂರಾಗಿರುವ ಒಟ್ಟು 1 ಕೋಟಿ ರೂ. ವೆಚ್ಚದ ಸಂಪೂರ್ಣ ಸಿ.ಸಿ. ರಸ್ತೆ ನಿರ್ಮಾಣದ ಮಹತ್ವದ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಅವರು ಅಧಿಕೃತವಾಗಿ ಭೂಮಿ ಪೂಜೆ ನೆರವೇರಿಸಿದರು.ಈ ರಸ್ತೆ ನಿರ್ಮಾಣ ಕಾಮಗಾರಿಯು ಓರಾದ್-ಸದಾಶಿವಗಡ ರಾಜ್ಯ ಹೆದ್ದಾರಿಯಿಂದ ಆರಂಭಗೊಂಡು ಕುರುವಿನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವರೆಗೆ ಸಂಪೂರ್ಣವಾಗಿ ಸಾಗಲಿದ್ದು, ಅತ್ಯಂತ ಗುಣಮಟ್ಟದ ಸಿ.ಸಿ. ರಸ್ತೆಯಾಗಿ ನಿರ್ಮಾಣಗೊಳ್ಳಲಿದೆ.ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.
ಈ ರಸ್ತೆ ನಿರ್ಮಾಣದಿಂದ ದಶಕಗಳಿಂದ ಇದ್ದ ಸಂಚಾರದ ಸಮಸ್ಯೆ ನಿವಾರಣೆಯಾಗಲಿದ್ದು, ಶಾಲಾ ವಿದ್ಯಾರ್ಥಿಗಳಿಗೆ, ರೈತರಿಗೆ ಹಾಗೂ ಊರಿನ ಗ್ರಾಮಸ್ಥರಿಗೆ ಮತ್ತು ರಾಜ್ಯ ಹೆದ್ದಾರಿಗೆ ಸಂಪರ್ಕಿಸುವ ಸಾರ್ವಜನಿಕರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ, ಎಂದರು.ನಿಗದಿತ ಅವಧಿಯೊಳಗೆ ಅತ್ಯಂತ ಗುಣಮಟ್ಟದ ವಸ್ತುಗಳನ್ನು ಬಳಸಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಇದೇ ಸಂದರ್ಭದಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದರು.ಇದೇ ಸಂದರ್ಭದಲ್ಲಿ ಗ್ರಾಮದ ಶಂಕ್ರಯ್ಯ ಮಹಾಸ್ವಾಮಿಗಳು, ಪ್ರವೀಣ ರಾಮಪ್ಪನವರ, ಸುರೇಶ ತುಪ್ಪದ, ಪರುಶರಾಮ ಯಕ್ಕುಂಡಿ, ತಿರಕಪ್ಪ ತಮ್ಮನ್ನವರ, ಫಕೀರ್ಪ ಮೊರಬದ, ಮಂಜುನಾಥ ಅಣ್ಣಪ್ಪನವರ, ವಿಠ್ಠಲ ಹೂಲಿ, ದೊಡ್ಡೇಶ ಹರ್ಲಾಪೂರ, ರಮೇಶ್ ಅಥಣಿ, ಫಕೀರ್ಪ ಮಾದರ, ಲೋಕೋಪಯೋಗಿ ಇಲಾಖೆಯ ಅಧಿಕಾರಿ, ಹಾಗೂ ಕುರುವಿನಕೊಪ್ಪ ಗ್ರಾಮದ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 