ಬೆಂಗಳೂರು, ಡಿ.19 ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ತೆರಳಿ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಮಾಹಿತಿ ನೀಡಿದರು.ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ ರಾವ್, ಗುಪ್ತಚರ ಎಡಿಜಿಪಿ ಕಮಲ್ ಪಂಥ್ ಕೂಡ ಈ ಮೇಳೆ ಆಗಮಿಸಿದ್ದರು.ಸಿಎಎ ವಿರುದ್ಧ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೈಗೊಂಡಿರುವ ಭದ್ರತೆ ಕುರಿತು ಮುಖ್ಯಮಂತ್ರಿಗೆ ವಿವರಿಸಲಾಯಿತು. ಯಾವುದೇ ಅಹಿತಕರ ಘಟನೆಗಳಿಗರ ಅವಕಾಶ ನೀಡದಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.ಬಳಿಕ ಸುದ್ದಿಗಾರರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅಂಥರಿಂದಲೇ ಇಂಥ ಘಟನೆಗಳಾಗುತ್ತಿವೆ. ಉಳಿದಂತೆ ಎಲ್ಲೂ ಸಮಸ್ಯೆ ಆಗಿಲ್ಲ. ಎಲ್ಲರೂ ಅವರವರ ಪಾಡಿಗೆ ಇದ್ದಾರೆ. ಮುಸ್ಲಿಮರ ಸಂಪೂರ್ಣ ರಕ್ಷಣೆ ಹೊಣೆ ನಮ್ಮದು. ಶಾಂತಿ ಸುವ್ಯವಸ್ಥೆಗೆ ಸಹಕರಿಸಿ ಎಂದು ಮನವಿ ಮಾಡಿದರು.ಈ ಕಾಯಿದೆಯಿಂದ ಮುಸ್ಲಿಂ ಭಾಂದವರಿಗೆ ಯಾವುದೇ ತೊಂದರೆ ಆಗುವುದಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ನೀಡಿದ್ದೇನೆ. ಕಾಯ್ದೆ ಪರವಾಗಲೀ, ವಿರೋಧವಾಗಲೀ ಯಾರೂ ಪ್ರತಿಭಟನೆ ಮಾಡಬಾರದು ಎಂದು ಹೇಳಿದರು.ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಕಾಂಗ್ರೆಸ್ ನವರು ಇದನ್ನೇ ಮುಂದುವರೆಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕರಿಗೂ ಎಚ್ಚರಿಕೆ ನೀಡಿದರು.