ಲಖನೌ, ಡಿ 18 ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ
ಕೇಂದ್ರ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷ ಅಧ್ಯಕ್ಷ
ಹಾಗು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಟೀಕಾಪ್ರಹಾರ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಸಿಎಎ ಕಾರಣದಿಂದ
ದೇಶದ ಘನತೆಗೆ ಧಕ್ಕೆಯಾಗಿದೆ. ಕಾಯ್ದೆ ವಿರೋಧಿಸಿದ ಹಲವು ಪ್ರಖ್ಯಾತ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆಗಳು
ನಡೆಯುತ್ತಿವೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಂಡಿದೆ.
ಬಿಜೆಪಿಯ ಹಠದ ಸ್ವಭಾವ ದೇಶದ ಭವಿಷ್ಯಕ್ಕೆ ಅತ್ಯಂತ ದುರದೃಷ್ಟಕರವಾಗಲಿದೆ” ಎಂದು ಕಿಡಿಕಾರಿದ್ದಾರೆ.