ಸಿಎಎ; ಬಿಜೆಪಿಯಿಂದ ಸಹಿ ಸಂಗ್ರಹ ಅಭಿಯಾನCAA; Signature collection campaign by BJP
Lokadrshan Daily
1/6/25, 10:40 PM ಪ್ರಕಟಿಸಲಾಗಿದೆ
ಮಂಗಳೂರು, ಜ 7 , ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸೂಕ್ತ ಜಾಗೃತಿ ಮೂಡಿಸುವ ಹಾಗೂ ಅಪಪ್ರಚಾರದ ಪ್ರಯತ್ನ ವಿಫಲಗೊಳಿಸುವ ಉದ್ದೇಶದಿಂದ ಬಿಜೆಪಿ ಮಂಗಳವಾರ ಸುರತ್ಕಲ್ ನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನದ ಸಹಿ ಸಂಗ್ರಹ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ತಪ್ಪು ಮಾಹಿತಿ ನೀಡಿ ಅಲ್ಪಸಂಖ್ಯಾತರಿಗೆ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದೆ. ಬಿಜೆಪಿ ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರ ಅನ್ಯಾಯ, ತುಳಿತಕ್ಕೊಳಗಾದವರಿಗೆ ಭದ್ರತೆ ಕೊಡಲು ಮುಂದಾಗಿದೆ. ಆದರೆ ಕಾಂಗ್ರೆಸ್ ಅದಕ್ಕೆ ಅಡ್ಡಗಾಲು ಹಾಕುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಡಾ. ವೈ ಭರತ್ ಶೆಟ್ಟಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ ಇದ್ದರು.