ಬೀಜಿಂಗ್, ಫೆ 19,ಚೀನಾದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕಿಗೆ 2118 ಜನರು ಬಲಿಯಾಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಗುರುವಾರ ತಿಳಿಸಿದೆ.
ಚೀನಾದ 31 ಪ್ರಾಂತ್ಯಗಳಲ್ಲಿ ಸೋಂಕಿತರ ಸಂಖ್ಯೆ 74576 ದಷ್ಟಿದೆ. ಈ ಪೈಕಿ 56303 ಜನರು ಇನ್ನೂ ಗುಣಮುಖರಾಗಿಲ್ಲ. 11864 ಜನರ ಸ್ಥಿತಿ ಗಂಭೀರವಾಗಿದೆ. 16155 ಜನರು ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ವಾಪಸ್ ಕಳುಹಿಸಲಾಗಿದೆ ಎಂದು ಆಯೋಗದ ಹೇಳಿಕೆ ತಿಳಿಸಿದೆ.
ಡಿಸೆಂಬರ್ ಅಂತ್ಯದ ವೇಳೆಗೆ ಕೊರೊನಾ ವೈರಾಣು ಸೋಂಕು ಮೊದಲ ಬಾರಿಗೆ ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡಿತು. ಇದೀಗ 25 ಕ್ಕೂ ಹೆಚ್ಚು ದೇಶಗಳಿಗೆ ಹರಡಿದೆ. ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.