ಮುಂಬೈ,ಸೆ 10 ಐಎನ್ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಾಣಿ ಮುಖರ್ಜಿ ಪ್ರಶ್ನೆ ಮಾಡಲು ಸಿಬಿಐಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ಈ ಪ್ರಕರಣದಲ್ಲಿ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರು ಈಗಾಗಲೇ ಬಂಧನಕ್ಕೆ ಒಳಗಾಗಿದ್ದಾರೆ.
ಮಗಳ ಕೊಲೆ ಪ್ರಕರಣದಲ್ಲಿ ಸಹ ಆರೋಪಿಗಳಾಗಿ ಜೈಲಿನಲ್ಲಿ ಇರುವ ಇಂದ್ರಾಣಿ ಮುಖರ್ಜಿ ಮತ್ತು ಅವರ ಪತಿ ಪೀಟರ್ ಮುಖರ್ಜಿ ಅವರುಗಳು ಐಎನ್ಎಕ್ಸ್ ಮೀಡಿಯಾ ಗ್ರೂಪ್ನ ಮಾಜಿ ಪ್ರವರ್ತಕರಗಿದ್ದಾರೆ.ಚಿದಂಬರಂ ಮತ್ತು ಅವರ ಪುತ್ರ ಕಾತರ್ಿ ವಿರುದ್ಧ ಇಂದ್ರಾಣಿ ಮುಖರ್ಜಿ ಅವರು ತಪ್ಪೊಪ್ಪಿಗೆಯ ಹೇಳಿಕೆ ದಾಖಲಿಸಿದ್ದರು, ಇದರ ಆಧಾರದ ಮೇಲೆ ಚಿದಂಬರಂ ಅವರನ್ನು ಬಂಧಿಸಲಾಗಿತ್ತು.
ಭ್ರಷ್ಟಾಚಾರ ಪ್ರಕರಣದ ಭಾಗವಾಗಿ ಕೆಲವು ಹಣಕಾಸು ವಹಿವಾಟುಗಳ ಬಗ್ಗೆ ಸ್ಪಷ್ಟತೆ ಬೇಕಿದ್ದು ಇದಕ್ಕಾಗಿ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ನ್ಯಾಯಾಲಯದ ಅನುಮತಿ ಕೋರಿತ್ತು.
ವಿಶೇಷ ಬೈಕುಲ್ಲಾ ಜೈಲಿನೊಳಗೆ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ವಿಶೇಷ ಸಿಬಿಐ ನ್ಯಾಯಾಧೀಶ ಜೆ ಸಿ ಜಗ್ಡೇಲ್ ಅವರು ತನಿಖಾ ಸಂಸ್ಥೆಗೆ ಅನುಮತಿ ನೀಡಿದ್ದಾರೆ. ಮಗಳು ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಅವರಿಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.
47 ವರ್ಷದ ಮಾಜಿ ಮಾಧ್ಯಮ ಕಾರ್ಯನಿರ್ವಾಹಕರನ್ನು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರ ನಡುವೆ ಪ್ರಶ್ನಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳದೆ 21 ರಂದು ತನಿಖಾ ಸಂಸ್ಥೆಗಳು ಮಾಜಿ ಕೇಂದ್ರ ಸಚಿವ ಚಿದಂಬರಂ ಅವರನ್ನು ಬಂಧಿಸಿತ್ತು ನಂತರ ಅವರ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಚಿದು ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ.