ಬೆಂಗಳೂರು, ಆ 18 ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ರಾಜ್ಯ ಸಕರ್ಾರದ ನಿಧರ್ಾರವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ವಾಗತಿಸಿದ್ದಾರೆ. ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ಟೆಲಿಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿಧರ್ಾರ ಸ್ವಾಗತಾರ್ಹ. ಪೋನ್ ಕದ್ದಾಲಿಕೆ ಅಕ್ಷಮ್ಯ ಅಪರಾಧ. ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆಯಾಗಬೇಕು. ಇದರಲ್ಲಿ ಸೇಡಿನ ರಾಜಕಾರಣ ದ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನಾಯಕರು ಸಹ ಸೂಕ್ತ ತನಿಖೆಗೆ ಒತ್ತಾಯಿಸಿದ್ದರು. ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ. ಇನ್ನೊಂದೆಡೆ, ಬಿಜೆಪಿ ಶಾಸಕ ಸಿ.ಟಿ.ರವಿ ಸಕರ್ಾರದ ನಿಧರ್ಾರದ ಕುರಿತು ಪ್ರತಿಕ್ರಿಯೆ ನೀಡಿದ್ದು, ದೂರವಾಣಿ ಟ್ಯಾಪಿಂಗ್ ಮಹಾಪರಾಧ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಅಧಿಕಾರಿಗಳು ಆಡಳಿತದಲ್ಲಿರುವವರ ಬಕೆಟ್ ಹಿಡಿಯುವ ಕೆಲಸ ಮಾಡುವ ಪ್ರವೃತ್ತಿಗೆ ಕಡಿವಾಣ ಬೀಳಬೇಕು ಎಂದು ಹೇಳಿದ್ದಾರೆ. ಮಾಜಿ ಸಚಿವ ಹಾಗೂ ಅನರ್ಹ ಬಿಜೆಪಿ ಶಾಸಕ ಎಚ್.ವಿಶ್ವನಾಥ್ ಕೂಡ ಈ ನಿಧರ್ಾರವನ್ನು ಸ್ವಾಗತಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆಯಂತಹ ನೀಚ ಕೆಲಸ ಮಾಡಿದ್ದಾರೆ. ಫೋಣ್ ಟ್ಯಾಪಿಂಗ್ ಮಾಡಿ ಬ್ಲಾಕ್ ಮೇಲ್ ಮಾಡುವ ತಂತ್ರ ರೂಪಿಸಿದ್ದರು. ಭಯೋತ್ಪಾದಕರಿಗೂ ಇಂತಹವರಿಗೂ ಏನು ವ್ಯತ್ಯಾಸವಿದೆ. ಇವರೂ ಒಂದು ರೀತಿಯ ಭಯೋತ್ಪಾದಕರಿದ್ದಂತೆ. ಈ ಬಗ್ಗೆ ತನಿಖೆ ಗೆ ಆದೇಶಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ಈ ನಿಧರ್ಾರವನ್ನು ತೀವ್ರವಾಗಿ ವಿರೋಧಿಸಿರುವ ಕಾಂಗ್ರೆಸ್, ಯಡಿಯೂರಪ್ಪ ಅವರನ್ನು ಭೂಗತಪಾತಕಿ ಎಂದು ಹೀಯಾಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ, ಆಪರೇಷನ್ ಕಮಲದ ಮೂಲಕ ಸಕರ್ಾರ ಬೀಳಿಸಿ ಹಿಂಬಾಗಿಲ ಮೂಲಕ ಸಿಎಂ ಆಗಿರುವ ಯಡಿಯೂರಪ್ಪ ಭೂಗತಪಾತಕಿ ರೀತಿ ವತರ್ಿಸುತ್ತಿದ್ದಾರೆ. ಮೋದಿ ಆಳ್ವಿಕೆ ಯಲ್ಲಿ ಸಿಬಿಐ ಬಿಜೆಪಿ ಮುಂಚೂಣಿ ಘಟಕವಾಗಿ ಕೆಲಸ ಮಾಡುತ್ತಿದೆ. ಪೋನ್ ಕದ್ದಾಲಿಕೆ ಎಂಬುದೊಂದು ಸುಳ್ಳು, ದ್ವೇಷ ರಾಜಕಾರಣದ ಸಂಚು ಎಂದಿದ್ದಾರೆ. ಈ ನಡುವೆ, ಪೊಲೀಸ್ ಮಹಾನಿದರ್ೆಶಕಿ ನೀಲಮಣಿ ರಾಜು ಅವರು ಭಾನುವಾರ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದು, ದೂರವಾಣಿ ಕದ್ದಾಲಿಕೆ ಪ್ರಕರಣ ಕುರಿತು ಸಿಎಂ ಜತೆ ಚಚರ್ಿಸಿದ್ದಾರೆ. ಸಿಬಿಐ ತನಿಖೆಗೆ ಅಗತ್ಯ ಸಹಕಾರ ನೀಡಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
**