ನವದೆಹಲಿ, ಜೂ 30 ;ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ-ಸಿಬಿಎಸ್‌ಇಯಲ್ಲಿ ವಿದ್ಯಾರ್ಥಿಗಳ ಈವರೆಗಿನ ತರಗತಿಗಳಲ್ಲಿನ ಸಾಧನೆ ಆಧಾರದ ಮೇಲೆ 10 ಮತ್ತು 12ನೇ ತರಗತಿಗಳಮೌಲ್ಯಮಾಪನ ಅಳೆಯುವ ಪ್ರಕ್ರಿಯೆ ಆರಂಭವಾಗಿದೆ. ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುತ್ತಿದ್ದು, ಜುಲೈ 15 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಡಾ.ಸನ್ಯಾಂ ಭಾರದ್ವಾಜ್ ತಿಳಿಸಿದ್ದಾರೆ. ಮೌಲ್ಯಮಾಪನ ಮಾಡುವಾಗ ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಪರಿಗಣಿಸಲಾಗುತ್ತಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಸಪರ್ಪಕವಾಗಿ ಪಾಲನೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.