ಉಗಾರ ಪುರಸಭೆ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
CC road work launched in Ugara Municipality
ಉಗಾರ ಪುರಸಭೆ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
ಕಾಗವಾಡ 14: ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನ ದೊರೆಯುತ್ತಿದ್ದು, ಉಗಾರ ಪಟ್ಟಣದ ಪುರಸಭೆ ಸದಸ್ಯರು ಪಕ್ಷಭೇದ ಮರೆತು, ಪಟ್ಟಣದ ಅಭಿವೃದ್ಧಿಗೆ ಕೈಜೋಡಿಸಿ, ಮಾದರಿ ಪಟ್ಟಣವನ್ನಾಗಿಸಲು ಶ್ರಮಿಸಬೇಕೆಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ಅವರು, ರವಿವಾರ ದಿ. 14 ರಂದು ತಾಲೂಕಿನ ಉಗಾರ ಖುರ್ದ ಪುರಸಭೆ ವ್ಯಾಪ್ತಿಯಲ್ಲಿ ರೂ.3.75 ಕೋಟಿ ವಿವಿಧ ಅನುದಾನದಗಳಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ ನೀಡಿ, ಮಾತನಾಡುತ್ತಿದ್ದರು. ವಿರೋದ ಪಕ್ಷದವರು ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡ ನಂತರ ಅಭಿವೃದ್ಧಿಗೆ ಅನುದಾನ ಬರುತ್ತಿಲ್ಲವೆಂದು ಹೇಳುತ್ತಿರುವ ವಿರೋಧಿಗಳಿಗೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳೇ ಉತ್ತರವಾಗಿವೆ ಎಂದರು.
ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಪುರಸಭೆ ಸದಸ್ಯರು, ಅಧಿಕಾರಿಗಳು ಎಲ್ಲರೂ ಕೂಡಿಕೊಂಡು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಗುಣಮಟ್ಟದ ಕಾಮಗಾರಿಗಳು ಆಗುವಂತೆ ನಿಗಾ ವಹಿಸಿಬೇಕು ಎಂದರು.
ಕೃಷ್ಣಾ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶಂಕರ ವಾಘಮೋಡೆ, ಪುರಸಭೆ ಅಧ್ಯಕ್ಷೆ ಫಾತಿಮಾ ನದಾಫ, ಹಿರಿಯ ಅಭಿಯಂತರ ಡಿ.ಬಿ. ಪಠಾಣ, ಗುತ್ತಿಗೆದಾರ ಸಂದೀಪ ಖರಾಡೆ, ಅಜೀತ ಭೋಸಲೆ, ವಿಕಾಸ ಪಾಂಡರೆ, ಮುಖಂಡರಾದ ಸುರೇಶ ವಾಘಮೋಡೆ, ವೀರಭದ್ರ ಕಟಗೇರಿ, ಅಶೋಕ ಕಾಂಬಳೆ, ಆರತಿ ಜಗತಾಪ, ವಿಜಯ ಅಸೋದೆ, ಶೇಖರ ಖರಾಡೆ, ಪ್ರಕಾಶ ಥೋರೂಸೆ, ಬಾಳು ಕಟಗೇರಿ, ರಾಜೇಶ ದಾನೋಳೆ, ಮದನ ದೇಶಿಂಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 