ಬೆಂಗಳೂರು, ಏ.14, ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 8 ಜನರನ್ನು ಬಂಧಿಸಿದ್ದಾರೆ.ಲಾಕ್ ಡೌನ್ ಆದೇಶವಿದ್ದರೂ ಸೋಮವಾರ ನಗರದ ಗಂಗಮ್ಮಬಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಸಂಗಂ ರಿಕ್ರಿಯೇಷನ್ ಅಸೋಸಿಯೇಷನ್ ನಲ್ಲಿ ಕ್ಲಬ್ ನಲ್ಲಿ 8-10 ಜನ ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು.ಜೂಜಾಡುತ್ತಿದ್ದ 8 ಜನರನ್ನು ಬಂಧಿಸಿ, 17,040 ನಗದು ವಶಪಡಿಸಿಕೊಳ್ಳಲಾಗಿದ್ದು, ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಡಿಟಿ ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ ದಾಳಿ ಕೈಗೊಳ್ಳಲಾಗಿತ್ತು.