ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

 ಬೆಂಗಳೂರು, ಅ 9:   ಜೈಲಿನೊಳಗೆ ಮೊಬೈಲ್, ಗಾಂಜಾ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪದಡಿ ಬೆಳ್ಳಂಬೆಳಗ್ಗೆ ಬುಧವಾರ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರದ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ 60 ಸಿಸಿಬಿ ಪೊಲೀಸರ ತಂಡ ಜೈಲಿನ ಮೇಲೆ ನಡೆಸಿದ್ದು, ಜೈಲಿನಲ್ಲಿರುವ ಕೈದಿಗಳ ವಿಚಾರಣೆ ನಡೆಸುತ್ತಿದ್ದಾರೆ. ನಗರ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆಸಲಾಗಿದ್ದು, ಕೈದಿಗಳ ವಿಚಾರಣೆ ಮುಂದುವರೆದಿದೆ. ಜೈಲಿನಲ್ಲಿ ಗಾಂಜಾ ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.