ಕ್ಲಬ್‌ಗೆ ಸಿಸಿಬಿ ದಾಳಿ: ಜೂಜಾಡುತ್ತಿದ್ದ 16 ಜನರ ಬಂಧನ
CLUB
ಬೆಂಗಳೂರು, ನ 27- ನಗರದ ಚಿತ್ರ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾಲೀಕ ಸೇರಿ 16 ಜನರನ್ನು ಬಂಧಿಸಿದ್ದಾರೆ.
ಕ್ಲಬ್ ಮಾಲಿಕ ಮಂಜುನಾಥ್(41), ನರೇಶ್ ಬಾಬು (49), ಚಿಕ್ಕಣ್ಣ (42), ಕಾಂತರಾಜು (33) ಹಾಗೂ ಕೃಷ್ಣ (38) ಸೇರಿ 16 ಜನ ಬಂಧಿತ ಆರೋಪಿಗಳು.
ನಗರದ ಸುಂಕದಕಟ್ಟೆಯ ಚಿತ್ರ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್ ನಲ್ಲಿ ಸದಸ್ಯರಲ್ಲದವರು ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ 56,200 ನಗದು ಹಾಗೂ 7 ಇಸ್ಟೀಟ್ ಕಟ್ಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಬಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಡಿ.ಟಿ. ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 