ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
CCB police raid – Heroin worth 4.96 lakh seized, one arrested.
ಬೆಳಗಾವಿ : ನಗರದ ಎಪಿಎಂಸಿ ಹಣ್ಣಿನ ಮಾರುಕಟ್ಟೆ ಸಮೀಪ ಹೆರಾಯಿನ್ ಸಾಗಾಟ ನಡೆಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತೋರ್ವನಿಗಾಗಿ ಶೋಧ ಮುಂದುವರೆಸಿದ್ದಾರೆ.
ಈ ಪ್ರಕರಣದಲ್ಲಿ ಬಂಧಿತನನ್ನು ಮಹಾದೇವ ಗಜಾನನ ಪಾಟೀಲ(28) ಎಂದು ಗುರುತಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ವಿನಾಯಕ ಬಾಳು ಖಂಡಾಳೆ(25) ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಶೋಧ ಕರ‍್ಯ ಕೈಗೊಂಡಿದ್ದಾರೆ. ಬಂಧಿತ ಇವರಿಬ್ಬರು ಸಾ: ಪಾಟೀಲ ಗಲ್ಲಿ, ಮಹಾದ್ವಾರ ರೋಡ, ಕಂಗ್ರಾಳಿ ಕೆ.ಹೆಚ್, ಬೆಳಗಾವಿ ನಿವಾಸಿಗಳಾಗಿದ್ದಾರೆ. ಜುಲೈ 2ರಂದು ಸಿಸಿಬಿ ಪಿಐ ಮಂಜುನಾಥ ನಾಯಕ ಅವರ ನೇತೃತ್ವದಲ್ಲಿ, ಪಿಎಸ್‌ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿ ಎಪಿಎಂಸಿ ಹಣ್ಣಿನ ಮಾರುಕಟ್ಟೆ ಕಾಂಪ್ಲೆಕ್ಸ್ ಮೆಟ್ಟಿಲುಗಳ ಬಳಿ ದಾಳಿ ನಡೆಸಿದರು.
ಈ ವೇಳೆ ಆರೋಪಿಗಳಿಂದ ಅಂದಾಜು 4,96,000 ಮೌಲ್ಯದ 24.80 ಗ್ರಾಂ ಹೆರಾಯಿನ್ ಹಾಗೂ 5,000 ಮೌಲ್ಯದ ಮೊಬೈಲ್ ಸೇರಿದಂತೆ ಒಟ್ಟು 5,01,000 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳಿಗೆ ಮುಂಬೈನ "ಅಮ್ಮ" ಎಂಬ ಮಹಿಳೆ ಹೆರಾಯಿನ್ ಪೂರೈಸಿರುವ ಮಾಹಿತಿ ಲಭ್ಯವಾಗಿದೆ. ಈ ಸಂಬAಧ ಆಕೆಯ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 120/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಹಾಗೂ 21(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ. ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿಗಳು ಅಭಿನಂದಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 