ರೋಣ ತಾಲೂಕಿನಲ್ಲಿ ಸಿಇಓ ಭರತ ಭೇಟಿ: ಜೆಜೆಎಂ ಪರೀಶೀಲನೆ
CEO Bharath's visit to Rona taluk: JJM review
ರೋಣ ತಾಲೂಕಿನಲ್ಲಿ ಸಿಇಓ ಭರತ ಭೇಟಿ: ಜೆಜೆಎಂ ಪರೀಶೀಲನೆ
ಗದಗ 29 :- ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭರತ್ ಎಸ್ ಅವರು ರೋಣ ತಾಲೂಕಿನ ಬಾಸಾಲಪೂರ, ಹಿರೇಮಣ್ಣೂರ,ಸಂದಿಗವಾಡ, ಹಾಗೂ ಡ.ಸ.ಹಡಗಲಿ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ, ಜಲ ಜೀವನ್ ಮಿಷನ್ (ಜೆಜೆಎಂ) ಹಾಗೂ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಪರೀಶೀಲಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರೊಂದಿಗೆ ಕುಡಿಯುವ ನೀರಿನ ಪೂರೈಕೆಯ ಗುಣಮಟ್ಟ, ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಸೂಚನೆಯಂತೆ, ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರೀಶೀಲಿಸಿ ವರದಿ ಸಲ್ಲಿಸುವ ಜವಾಬ್ದಾರಿಯನ್ನು ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್ ಅವರು ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ರೋಣ ತಾಲೂಕಿನ ಆಯ್ದ ಗ್ರಾಮಗಳಿಗೆ ಅನೀರೀಕ್ಷಿತ ಭೇಟಿ ನೀಡಿ, ಜೆಜೆಎಂ ಕಾಮಗಾರಿಗಳು,ಸಂಪರ್ಕಗಳ ಗುಣಮಟ್ಟ, ಮೀಟರ್ ಅಳವಡಿಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಕಾರ್ಯ ನಿರ್ವಹಣೆ ಮತ್ತು ನಿರ್ವಹಣೆ ಕುರಿತು ವಿವರವಾದ ಪರೀಶೀಲನೆ ನಡೆಸಿದರು.ಈ ಭೇಟಿಯಲ್ಲಿ ರೋಣ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ ದೊಡ್ಡಮನಿ, ಸಹಾಯಕ ಎಂಜಿನಿಯರ್, ಮಹದೇವಪ್ಪ ಹೊಸಮನಿ, ಪವನ ಪವಾರ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಚಂದ್ರಕಾಂತ ನರ್ಲೆಕರ, ಸಹಾಯಕ ಇಂಜಿನಿಯರ ಶರಣಬಸವ ಎಸ್ ಎಸ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.ಗ್ರಾಮಸ್ಥರೊಂದಿಗಿನ ಚರ್ಚೆಯಲ್ಲಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವ ಭರವಸೆಯನ್ನು ಸಿಇಒ ಭರತ್ ಎಸ್ ನೀಡಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಗುಣಮಟ್ಟದ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಪ್ರತಿ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಜಿಲ್ಲಾ ಪಂಚಾಯತ್ ಹೊಂದಿದೆ ಎಂದು ಗ್ರಾಮಸ್ಥರಿಗೆ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 