ಲೋಕದರ್ಶನವರದಿ
ಬ್ಯಾಡಗಿ18: ದೇಶದಾದ್ಯಂತ ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಟಿಸಿರುವ ಕೊರೊನಾ ವೈರಸ್ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ವಹಿಸಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿವರ್ಾಹಕ ಅಧಿಕಾರಿ ರಮೇಶ ದೇಸಾಯಿ ಹೇಳಿದರು.
ತಾಲೂಕಿನ ಮಲ್ಲೂರು ಗ್ರಾಮದಲ್ಲಿ ಶುಕ್ರವಾರ ನಡೆಸಲಾದ ಮನೆ ಮನೆಗೆ ಭೇಟಿ ನೀಡಿ ಜನರ ಆರೋಗ್ಯವನ್ನು ಪರಿಶೀಲಿಸುವ ಕಾರ್ಯವನ್ನು ವೀಕ್ಷಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಕೊರೊನ ವೈರಸ್ ಕುರಿತು ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ನಿರಂತರವಾಗಿ ಮುಂದುವರೆಸಿದ್ದು ಸಾರ್ವಜನಿಕರು ತಮ್ಮ ಆರೋಗ್ಯದ ಹಿತ ಕಾಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ತಿಳಿಸಿದರಲ್ಲದೆ ಗ್ರಾ. ಪಂ. ಕಾರ್ಯಪಡೆಯ ಸಮಿತಿಯು ಬಹು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿ ಆಬಿದ್ ಗದ್ಯಾಳ, ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೊರೋನಾ ವೈರಸ್ ಲಕ್ಷಣಗಳ ಬಗ್ಗೆ ಕರಪತ್ರ ಮತ್ತು ಧ್ವನಿವರ್ಧಕಗಳ ಮೂಲಕ ವ್ಯಾಪಕವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಸಹ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸ್ವಯಂ ಪ್ರೇರಣೆಯಿಂದ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಿ ಕೊಂಡು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಾಗೃತಿ ದಳದ ನೋಡೆಲ್ ಅಧಿಕಾರಿ ಕೆ ರಾಜಪ್ಪ, ಗ್ರಾ.ಪಂ. ನೋಡೆಲ್ ಅಧಿಕಾರಿಗಳಾದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಕೆ. ರುದ್ರಮುನಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಲಿಂಗಪ್ಪ ಅರಳಿಗುಪ್ಪಿ, ಅಕ್ಷರ ದಾಸೋಹದ ಅಧಿಕಾರಿ ಎನ್. ತಿಮ್ಮಾರೆಡ್ಡಿ, ಗ್ರಾಮೀಣ ಉದ್ಯೋಗದ ಸಹಾಯಕ ನಿದರ್ೆಶಕ ಪರಶುರಾಮ ಪೂಜಾರ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದೇವರಾಜ ಸಣ್ಣಕರಿಗಾರ, ಕಾರ್ಯದಶರ್ಿ ಫಕ್ಕೀರಪ್ಪ ಯತ್ನಳ್ಳಿ, ಆರೋಗ್ಯ ಇಲಾಖೆಯ ಸಹಾಯಕಿಯರು, ಆಶಾ ಕಾರ್ಯಕತರ್ೆಯರು, ಅಂಗನವಾಡಿ ಕಾರ್ಯಕತರ್ೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.