ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಸಿಇಒ ರಘುನಂದನ್ ಮೂರ್ತಿ ಭೇಟಿ

ಕೊಪ್ಪಳ: ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂರ್ತಿ  ಅವರು ಇಂದು (ಅ.18) ಭೇಟಿ ನೀಡಿದರು.

ಜಿ.ಪಂ. ಸಿಇಒ ರಘುನಂದನ್ ಮೂತರ್ಿ ಅವರು ಶುಕ್ರವಾರದಂದು ಜಿಲ್ಲಾ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿ, ಮಕ್ಕಳಿಗೆ, ರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆಗಳ ಬಗ್ಗೆ ವಿಚಾರಿಸಿ ಅವರ ಸಮಸ್ಯೆಗಳನ್ನು ಆಲಿಸಿದರು.  ಅಲ್ಲದೇ  ಆಸ್ಪತ್ರೆಯಲ್ಲಿರುವ ಪ್ರತಿಯೊಂದು ವಾಡರ್್ಗಳಿಗೆ ತೆರಳಿ ಪರಿಶೀಲನೆ ನಡೆಸಿದರು.  ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ಪ್ರತಿಯೊಬ್ಬರಿಗೂ ನಿಗದಿತ ಸಮಯದೊಳಗೆ ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ, ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಕುಮಾರ್ ಎಸ್ ಯರಗಲ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಲಿಂಗರಾಜ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಬಿ. ದಾನರೆಡ್ಡಿ ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.