ಪರಿಸರ ಸಂರಕ್ಷಣೆ, ಹಸರೀಕರಣ, ಪಾರಂಪರಿಕ ಸ್ಮಾರಕಗಳ ಸಂರಕ್ಷಣೆಗೆ ಜಾಗೃತಿ: ಸಿಇಒ ರಿಷಿ ಆನಂದ್ ಕರೆ
CEO Rishi Anand calls for awareness regarding environmental conservation, afforestation, and the pre
ವಿಜಯಪುರ 22: ಪರಿಸರ ಸಂರಕ್ಷಣೆ, ಹಸರೀಕರಣ ಹಾಗೂ ಪಾರಂಪರಿಕ ಸ್ಮಾರಕಗಳ ರಕ್ಷಣೆಯ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಡಿ. 13ರಂದು ‘ವೃಕ್ಷಥಾನ್ ಹೆರಿಟೇಜ್ ರನ್-2026’ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಇಲಾಖೆಯವರು ನೋಂದಣಿ ಮಾಡಿಕೊಂಡು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಕರೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್-2026ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ 30 ಸಾವಿರ ಓಟಗಾರರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಕಳೆದ ಬಾರಿ ಸುಮಾರು 23 ಸಾವಿರ ಓಟಗಾರರು ಪಾಲ್ಗೊಂಡಿದ್ದು, ಈ ಬಾರಿ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಓಟಗಾರರು ಭಾಗವಹಿಸುವಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಅಥ್ಲೀಟ್ಗಳನ್ನು ಗುರುತಿಸಿ ಓಟದಲ್ಲಿ ಪಾಲ್ಗೊಳ್ಳುವಂತೆ ಕ್ರೀಡಾ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರ ನಿರಂತರ ಪ್ರಯತ್ನದಿಂದ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಅರಣ್ಯೀಕರಣ ಪ್ರಮಾಣ ಹೆಚ್ಚಾಗಿದೆ.
ವಿಜಯಪುರದ ವೃಕ್ಷಥಾನ್ ಮತ್ತು ಹಸರೀಕರಣದ ಸಾಧನೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ವಿವಿಧ ರಾಜ್ಯಗಳಿಂದ ಆಗಮಿಸುವ ಓಟಗಾರರು ಪಾಲ್ಗೊಳ್ಳುವ ಈ ಕಾರ್ಯಕ್ರಮ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದರು. ವೃಕ್ಷಥಾನ್ನ ಉದ್ದೇಶ ಪರಿಸರ ಕಾಳಜಿಯೊಂದಿಗೆ ಜಿಲ್ಲೆಯ ಸ್ವಚ್ಛತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಹಸೀರೀಕರಣದ ಅಗತ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೂ ಇದರ ಆಶಯವಾಗಿದೆ. ಆದ್ದರಿಂದ ಎಲ್ಲರೂ ಉತ್ಸಾಹದಿಂದ ಭಾಗವಹಿಸಬೇಕು ಎಂದು ಹೇಳಿದರು. ಅ.11 ನೋಂದಣಿಗೆ ಕೊನೆ ದಿನವಾಗಿದೆ. ಕ್ರೀಡಾಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಓಟದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಸಿಇಒ ಹೇಳಿದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 