ವಿಜಯಪುರ ತಾಲ್ಲೂಕಿನ ಗ್ರಾಮ ಪಂಚಾಯತಿಗಳಿಗೆ ಸಿಇಒ ರಿಷಿ ಆನಂದ ದಿಢೀರ್ ಭೇಟಿ
CEO Rishi Anand makes surprise visits to Gram Panchayats in Vijayapura taluk
ಲೋಕದರ್ಶನ ವರದಿ
ವಿಜಯಪುರ 18 : ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಿಷಿ ಆನಂದ ಅವರು ಇಂದು ಬೆಳ್ಳಂಬೆಳಗ್ಗೆ 8 ಗಂಟೆಯಿಂದಲೇ ಕ್ಷೇತ್ರ ಭೇಟಿ ಆರಂಭಿಸಿ, ವಿಜಯಪುರ ತಾಲ್ಲೂಕಿನ ಐನಾಪುರ, ಮದಭಾವಿ, ಹೊನ್ನುಟಗಿ ಹಾಗೂ ಆಹೇರಿ ಗ್ರಾಮ ಪಂಚಾಯತಿಗಳಿಗೆ ದಿಢೀರ್ ಭೇಟಿ ನೀಡಿ, ಪಂಚಾಯಿತಿ ಆಡಳಿತ, ಅಧಿಕಾರಿಹಿಸಿಬ್ಬಂದಿ ಹಾಜರಾತಿ, ಸಾರ್ವಜನಿಕ ಸೇವೆ, ವಿಬಿಹಿಜಿ ರಾಮ್‌ಹಿಜಿ ಯೋಜನೆಯ ಅನುಷ್ಠಾನ ಹಾಗೂ ವಿವಿಧ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಸ್ಥಳದಲ್ಲಿಯೇ ಪರೀಶೀಲಿಸಿದರು. ಸಿಇಒ ಅವರು ಕಚೇರಿ ವೇಳೆಯ ಆರಂಭಕ್ಕೂ ಮುನ್ನವೇ ಕ್ಷೇತ್ರಕ್ಕೆ ತೆರಳಿ ಗ್ರಾಮ ಪಂಚಾಯಿತಿಗಳ ಕಾರ್ಯನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ವಾಸ್ತವ ಸ್ಥಿತಿಯನ್ನು ಪರೀಶೀಲಿಸಿರುವುದು,
ಗ್ರಾಮೀಣ ಅಭಿವೃದ್ಧಿ ಕಾರ್ಯಗಳಿಗೆ ಅವರು ನೀಡುತ್ತಿರುವ ಆದ್ಯತೆ ಹಾಗೂ ಆಡಳಿತದಲ್ಲಿ ಸಮಯಪಾಲನೆ ಮತ್ತು ಜವಾಬ್ದಾರಿತನಕ್ಕೆ ಒತ್ತು ನೀಡುತ್ತಿರುವುದನ್ನು ಪ್ರತಿಬಿಂಬಿಸಿತು. ದಿಢೀರ್ ಪರೀಶೀಲನೆಯ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಹಿಸಿಬ್ಬಂದಿಯ ಕರ್ತವ್ಯನಿಷ್ಠೆ, ಹಾಜರಾತಿ ಹಾಗೂ ಸಾರ್ವಜನಿಕ ಸೇವೆಯ ಸ್ಥಿತಿಗತಿಗಳನ್ನು ಪರೀಶೀಲಿಸಿದ ಅವರು, ಗ್ರಾಮ ಪಂಚಾಯಿತಿಗಳು ಸರ್ಕಾರದ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕ ಸೇವೆಯ ಪ್ರಮುಖ ಕೇಂದ್ರಗಳಾಗಿರುವುದರಿಂದ ಅಧಿಕಾರಿಹಿಸಿಬ್ಬಂದಿ ನಿಯಮಿತವಾಗಿ ಕರ್ತವ್ಯಕ್ಕೆ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 