ಜೆಜೆಎಂ ನಳ ಸಂಪರ್ಕಕ್ಕೆ ಮೋಟರ್ ಅಳವಡಿಸದಂತೆ ಸಿಇಒ ಸೂಚನೆ: ಜಿಪಂ ಸಿಇಒ ರಿಷಿ ಆನಂದರಿಂದ ತಾಲ್ಲೂಕಿನ ವಿವಿಧ ಜೆಜೆಎಂ ಕಾಮಗಾರಿ ಪರೀಶೀಲನೆ
CEO advises not to install motor for JJM pipe connection: Inspection of various JJM works in taluk b
ಜೆಜೆಎಂ ನಳ ಸಂಪರ್ಕಕ್ಕೆ ಮೋಟರ್ ಅಳವಡಿಸದಂತೆ ಸಿಇಒ ಸೂಚನೆ: ಜಿಪಂ ಸಿಇಒ ರಿಷಿ ಆನಂದರಿಂದ ತಾಲ್ಲೂಕಿನ ವಿವಿಧ ಜೆಜೆಎಂ ಕಾಮಗಾರಿ ಪರೀಶೀಲನೆ
ದೇವರಹಿಪ್ಪರಗಿ 31: ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೂ ನೀರಿನ ಸಂಪರ್ಕ ಸಮರ್ಕವಾಗಿ ಅನುಷ್ಠಾನದ ಬಗ್ಗೆ ಮುಳಸಾವಳಗಿ ಗ್ರಾ.ಪಂ ವ್ಯಾಪ್ತಿಯ ಪಡಗಾನೂರ ಗ್ರಾಮಕ್ಕೆ ಭೇಟಿ ನೀಡಿದರು. ಜೆಜೆಎಂ ನಳ ಸಂಪರ್ಕಕ್ಕೆ ಮೋಟರ್ ಅಳವಡಿಕೆ ಮಾಡದಂತೆ ವಿಜಯಪುರ ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ ಸೂಚಿಸಿದರು.
ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಬುಧವಾರದಂದು ಭೇಟಿ ನೀಡಿದ ಅವರು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಪ್ರತಿಮನೆಗೂ ಶುದ್ಧ ಹಾಗೂ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸಬೇಕು ಮತ್ತು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಕುಡಿಯುವ ನೀರು ನೈರ್ಮಲ್ಯ ಇಲಾಖೆ ಸಿಂದಗಿ ಎಇಇ ತಾರಾನಾಥ ರಾಠೋಡ ಅವರಿಗೆ ಸೂಚಿಸಿದರು. ಅಂಗನವಾಡಿ ಕೇಂದ್ರದ ಬಗ್ಗೆ ಗ್ರಾಮಸ್ಥರಿಗೆ ತಿಳಿ ಹೇಳಿ ಪೌಷ್ಟಿಕ ಆಹಾರ ನೀಡುವಂತೆ ತಿಳಿಸಲಾಯಿತು. ಕೊಂಡಗೂಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ನಳಸಂಪರ್ಕದ ಬಗ್ಗೆ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದರು. 1ನೇ ವಾರ್ಡ ನಲ್ಲಿ ಹಲವು ತಿಂಗಳುಗಳು ಕಳೆದಿದ್ದರೂ ಸಹ ನೀರಿನ ಸಂಪರ್ಕ ಒದಗಿಸಿಲ್ಲ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರೊಬ್ಬರ ಮಾತಿಗೆ 10ದಿನಗಳ ಒಳಗಾಗಿ ಸಮಸ್ಯೆ ಬಗೆಸರಿಸಲು ತಿಳಿಸಿದರು. ನಂತರ ಹಂಚಲಿ ಗ್ರಾಮಕ್ಕೆ ಭೇಟಿ ನೀಡಿ ಜೆಜೆಎಂ ಪೈಪ್ ಲೈನ್ ಸಂಪರ್ಕದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು. ನಂತರ ಕೊರವಾರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿದ್ದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚಲುವಯ್ಯ , ಎಡಿ ಶಿವಾನಂದ ಮೂಲಿಮನಿ, ಎಇಇ ತಾರಾನಾಥ ರಾಠೋಡ, ಸೆಕ್ಷನ್ ಆಫೀಸರ್ ಎಚ್.ಎಂ.ಸಾರವಾಡ, ತಾಂತ್ರಿಕ ಸಂಯೋಜಕ ಶರಣಗೌಡ ಪಾಟೀಲ, ಐಇಸಿ ಸಂಯೋಜಕರ ಸಿದ್ದು ಕಾಂಬಳೆ, ಪಿಡಿಓ ಗಳಾದ ಕಾಶಿನಾಥ ಕಡಕಬಾವಿ, ಎಲ್.ಟಿ.ಅಂಗಡಿ ಸೇರಿದಂತೆ ಗುತ್ತಿಗೆದಾರರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 