ಮುಂಗಾರು ಮಳೆ ಕೊರತೆ ಕುರಿತು ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ 3 ಗಂಟೆಗಳ ವಿಡಿಯೊ ಸಂವಾದ
CM D.K. Shivakumar holds a three-hour video conference with the state's Deputy Commissioners regardi
ಗದಗ 19 : ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ವಿಪತ್ತು ನಿರ್ವಹಣೆಗೆ ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚಿಸಿದರು.
ಭಾನುವಾರ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮೂರು ಗಂಟೆಗಳಿಗೂ ಹೆಚ್ಚು ಕಾಲ ನಡೆದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಸಚಿವರಾದ ಕೆ.ಜೆ. ಜಾರ್ಜ, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಕೃಷ್ಣ ಬೈರೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬರ ಪರಿಸ್ಥಿತಿಯ ನಿರ್ವಹಣೆಯಲ್ಲಿ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರ ಜನರೊಂದಿಗೆ ಇದೆ ಎಂಬ ವಿಶ್ವಾಸ ಮೂಡಿಸುವ ರೀತಿಯಲ್ಲಿ ಮಾಹಿತಿ ನೀಡಬೇಕು. ಕುಡಿಯುವ ನೀರು, ಪರಿಹಾರ ಕಾರ್ಯ, ಮೇವು ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಜನರಿಗೆ ನಿರಂತರ ಮಾಹಿತಿ ತಲುಪಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು, ಕೃಷಿ, ತೋಟಗಾರಿಕೆ ಹಾಗೂ ಪಶುಪಾಲನಾ ಇಲಾಖೆಗಳ ಅಧಿಕಾರಿಗಳು ಬರ ಪರಿಸ್ಥಿತಿಯ ದಿನನಿತ್ಯದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಅಗತ್ಯವಿರುವ ಜಿಲ್ಲೆಗಳಿಗೆ ಪರಿಹಾರ ಕಾರ್ಯಕ್ಕಾಗಿ ಹಣ ಬಿಡುಗಡೆ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದ ಎಲ್ಲ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಅಗತ್ಯವಿರುವ ಕಡೆ ಮೇವು ಬ್ಯಾಂಕ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಮಳೆ ಕೊರತೆ ಮುಂದುವರಿದರೆ ಇನ್ನಷ್ಟು ತಾಲೂಕುಗಳು ಬರದ ವ್ಯಾಪ್ತಿಗೆ ಬರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮಗಳಿಗೆ ಆದ್ಯತೆ ನೀಡಬೇಕು ಎಂದರು.
ಶೀಘ್ರದಲ್ಲೇ ಕೇಂದ್ರದ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು ಹಾಗೂ ಶುದ್ಧ ನೀರಿನ ಘಟಕಗಳು ಸಮರ್ಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.
ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಮಾತನಾಡಿ, 1965 ಹಾಗೂ 1972ರ ಬಳಿಕ ರಾಜ್ಯ ಗಂಭೀರ ಮಳೆ ಕೊರತೆಯನ್ನು ಎದುರಿಸುತ್ತಿದೆ. ಸುಮಾರು 88 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವ ವರದಿಗಳಿವೆ ಎಂದು ಹೇಳಿದರು. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ ವಿಶೇಷ ಒತ್ತು ನೀಡಬೇಕು ಎಂದು ಸೂಚಿಸಿದರು.
ಬರದಿಂದ ಗುಳೆ ಹೋಗುವ ಪರಿಸ್ಥಿತಿ ತಡೆಯಲು ವಿಬಿ-ಜಿ ರಾಮ್ಜಿ ಯೋಜನೆ ಅಡಿ ಉದ್ಯೋಗ ಸೃಷ್ಟಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕು. ಈಗಾಗಲೇ 487 ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳು ಆರಂಭವಾಗಿದ್ದು, ಉಳಿದ ಗ್ರಾಮ ಪಂಚಾಯಿತಿಗಳಲ್ಲೂ ಕೂಡಲೇ ಆರಂಭಿಸುವಂತೆ ಜಿಪಂ ಸಿಇಒಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಗದಗ ಜಿಲ್ಲೆಯ ಎಲ್ಲ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ವಿಡಿಯೊ ಸಂವಾದದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಮುಖ್ಯಮಂತ್ರಿ ವಿಶೇಷ ಪ್ರಶಂಸೆ ವ್ಯಕ್ತಪಡಿಸಿದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 